ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid Karnataka Update| ಇಂದು 10 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆ

Last Updated 1 ಅಕ್ಟೋಬರ್ 2020, 15:22 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಒಟ್ಟು 10,070 ಕೋವಿಡ್‌ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿವೆ. ಇದೇ ವೇಳೆ 130 ಸಾವುಗಳೂ ಸಂಭವಿಸಿವೆ.

ಈ ಮೂಲಕ ರಾಜ್ಯದ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ ಗುರುವಾರ 6,11,837 ಕ್ಕೆ ಏರಿಕೆಯಾಗಿದ್ದಾರೆ, ಸಾವಿನ ಸಂಖ್ಯೆ 8,994 ಆಗಿದೆ.

ಇದೇ 24 ಗಂಟೆಗಳ ಅವಧಿಯಲ್ಲಿ 7144 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಸಂಖ್ಯೆ ಗುರುವಾರದ ಹೊತ್ತಿಎಗೆ 492412ಕ್ಕೆ ಏರಿದೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯವಾಗಿರುವುದು 1,10,412 ಪ್ರಕರಣಗಳು ಮಾತ್ರ. 811 ‌ಮಂದಿ ಸದ್ಯ ರಾಜ್ಯದ ವಿವಿಧ ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಬೆಂಗಳೂರಲ್ಲಿ ಈ 24 ಗಂಟೆಗಳಲ್ಲಿ ವರದಿಯಾಗಿರುವುದು 4853 ಪ್ರಕರಣಗಳು. ಈ ಮೂಲಕ ರಾಜಧಾನಿಯ ಒಟ್ಟಾರೆ ಕೋವಿಡ್‌ ಪ್ರಕರಣಗಳ ಸಂಖ್ಯೆ 2,37,516ಕ್ಕೆ ಏರಿದೆ. ಇದೇ ಅವಧಿಯಲ್ಲಿ 41 ಮಂದಿ ಮೃತಪಟ್ಟಿದ್ದಾರೆ. ಕೋವಿಡ್‌ನಿಂದ ಈ ವರೆಗೆ ಬೆಂಗಳೂರಿನಲ್ಲಿ 2,977 ಮಂದಿ ಪ್ರಾಣಬಿಟ್ಟಿದ್ದಾರೆ.

ಜಿಲ್ಲಾವಾರು ಅಂಕಿ ಅಂಶಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT