ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಖಾಸಗಿ ಸಹಭಾಗಿತ್ವದಲ್ಲಿ ಪ್ರಯೋಗಾಲಯ ಸ್ಥಾಪನೆ’

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್
Last Updated 2 ಅಕ್ಟೋಬರ್ 2020, 20:04 IST
ಅಕ್ಷರ ಗಾತ್ರ

ಬೆಂಗಳೂರು: ‘ಖಾಸಗಿ ಸಹಭಾಗಿತ್ವದಲ್ಲಿ ಕೋವಿಡ್ ಪ್ರಯೋಗಾಲಗಳ ಸ್ಥಾಪನೆಗೆ ಸರ್ಕಾರ ನಿರ್ಧರಿಸಿದ್ದು, ಮುಂದಿನ ದಿನಗಳಲ್ಲಿ ಪರೀಕ್ಷೆಗಳ ಸಂಖ್ಯೆಯನ್ನು ಮೂರು ಪಟ್ಟು ಹೆಚ್ಚಿಸಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ಯೂರೋಫಿನ್ಸ್‌ ಕ್ಲಿನಿಕಲ್‌ ಜೆನೆಟಿಕ್‌ ಇಂಡಿಯಾ ವೈಟ್‌ಫೀಲ್ಡ್‌ನಲ್ಲಿ ಸ್ಥಾಪಿಸಿರುವ ಕೋವಿಡ್‌ ಪರೀಕ್ಷಾ ಪ್ರಯೋಗಾಲಯವನ್ನು ಶುಕ್ರವಾರ ಉದ್ಘಾಟಿಸಿ, ಮಾತನಾಡಿದರು.

‘ಪ್ರಯೋಗಾಲಯಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಇಲಾಖೆ ಜಂಟಿಯಾಗಿ ಕಾರ್ಯಕ್ರಮ ರೂಪಿಸಿದ್ದು, ಆ ನಿಟ್ಟಿನಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ವಾರದೊಳಗೆ ಟೆಂಡರ್ ಕರೆಯಲಾಗುವುದು’ ಎಂದು ತಿಳಿಸಿದರು.

145 ಪ್ರಯೋಗಾಲಯ:‘ರಾಜ್ಯದಲ್ಲಿ 6 ತಿಂಗಳಲ್ಲಿ 145 ಕೋವಿಡ್‌ ಪರೀಕ್ಷಾ ಪ್ರಯೋಗಾಲಯಗಳನ್ನು ಪ್ರಾರಂಭಿಸಲಾಗಿದೆ. ಯುರೋಫಿನ್ಸ್‌ ಪ್ರಯೋಗಾಲಯದಲ್ಲಿ‌ ದಿನಕ್ಕೆ ಗರಿಷ್ಠ 5 ಸಾವಿರ ಪರೀಕ್ಷೆ ನಡೆಸಬಹುದು‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT