ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ನೆಗೆಟಿವ್‌ ವರದಿ ಬೇಡ: ಸುಧಾಕರ್‌

Last Updated 17 ಫೆಬ್ರುವರಿ 2022, 19:47 IST
ಅಕ್ಷರ ಗಾತ್ರ

ಬೆಂಗಳೂರು: ಗೋವಾ ಮತ್ತು ಕೇರಳದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು ಇನ್ನು ಮುಂದೆ ನೆಗೆಟಿವ್‌ ಆರ್‌ಟಿ–ಪಿಸಿಆರ್‌ ಪರೀಕ್ಷಾ ವರದಿ ಸಲ್ಲಿಸುವ ಅಗತ್ಯ ಇಲ್ಲ.

ಆದರೆ, ಎರಡು ಡೋಸ್‌ ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣಪತ್ರ ಹೊಂದುವುದು ಕಡ್ಡಾಯ ಎಂದು ಸಚಿವ ಡಿ. ಸುಧಾಕರ್‌ ಟ್ವೀಟ್‌ ಮಾಡಿದ್ದಾರೆ.

‘ಕೋವಿಡ್‌–19 ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿ ಕೇರಳ ಮತ್ತು ಗೋವಾದಿಂದ ರೈಲ್ವೆ, ವಿಮಾನ ಹಾಗೂ ರಸ್ತೆ ಸಾರಿಗೆ ಮತ್ತು ವೈಯಕ್ತಿಕ ವಾಹನದ ಮೂಲಕ ಕರ್ನಾಟಕಕ್ಕೆ ಬರುವ ಪ್ರಯಾಣಿಕರು ಕಡ್ಡಾಯವಾಗಿ ಆರ್‌ಟಿ–ಪಿಸಿಆರ್‌ ನೆಗೆಟಿವ್ ಪರೀಕ್ಷಾ ವರದಿಯನ್ನು ಸಲ್ಲಿಸುವುದನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‌ ಕುಮಾರ್‌ ಸುತ್ತೋಲೆ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT