ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಹೊಸ ಪ್ರಕರಣಗಳು 188ಕ್ಕೆ ಇಳಿಕೆ

Last Updated 2 ಮಾರ್ಚ್ 2022, 19:42 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಬುಧವಾರ 188ಕ್ಕೆ ಇಳಿಕೆಯಾಗಿದೆ. ಸೋಂಕು ದೃಢ ಪ್ರಮಾಣವೂ ಶೇ 0.45ಕ್ಕೆ ಕುಸಿದಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೀದರ್‌, ಹಾವೇರಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಹೊಸ ಸೋಂಕು ಪ್ರಕರಣಗಳು ವರದಿಯಾಗಿಲ್ಲ. ಬೆಂಗಳೂರಿನಲ್ಲಿ 106 ಸೋಂಕು ಪ್ರಕರಣಗಳು ದೃಢಪಟ್ಟಿವೆ. ಈವರೆಗೆ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 39.41 ಲಕ್ಷಕ್ಕೆ ಏರಿಕೆಯಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಇಳಿಮುಖವಾಗಿದೆ. 4,207 ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರ ಪೈಕಿ ಬೆಂಗಳೂರಿನಲ್ಲಿ 370 ಮಂದಿ ಸೇರಿದಂತೆ ರಾಜ್ಯದಲ್ಲಿ 816 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 38.97 ಲಕ್ಷಕ್ಕೆ ತಲುಪಿದೆ.

ಸೋಂಕಿತರಲ್ಲಿ 12 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ನಾಲ್ವರು, ಧಾರವಾಡದಲ್ಲಿ ಇಬ್ಬರು, ಬಳ್ಳಾರಿ, ಹಾಸನ, ಮಂಡ್ಯ, ರಾಮನಗರ, ತುಮಕೂರು, ಉಡುಪಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮರಣ ಪ್ರಮಾಣ ದರವು ಶೇ 6.38ರಷ್ಟು ವರದಿಯಾಗಿದೆ. ಈವರೆಗೆಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 39,969ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT