ಶುಕ್ರವಾರ, ನವೆಂಬರ್ 27, 2020
18 °C

ಕೋವಿಡ್: ಸೋಂಕಿತರ ಸಂಖ್ಯೆ 8.16 ಲಕ್ಷಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಗುರುವಾರ 4,025 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 8.16 ಲಕ್ಷಕ್ಕೆ ಏರಿಕೆಯಾಗಿದೆ.

10 ದಿನಗಳಲ್ಲಿ 46,205 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 4,620 ಮಂದಿ ಸೋಂಕಿತರಾಗಿದ್ದಾರೆ. ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ 19 ಮಂದಿ ಸೇರಿದಂತೆ ರಾಜ್ಯದಲ್ಲಿ 45 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಇದರಿಂದಾಗಿ ಸೋಂಕಿನಿಂದ ಸಾವಿಗೀಡಾದವರ ಒಟ್ಟು ಸಂಖ್ಯೆ 11,091ಕ್ಕೆ ತಲುಪಿದೆ. ಸದ್ಯ ಮರಣ ಪ್ರಮಾಣ ದರ ಶೇ 1.4 ರಷ್ಟಿದೆ.

ಬೆಂಗಳೂರಿನಲ್ಲಿ 4,378 ಮಂದಿ ಸೇರಿದಂತೆ ರಾಜ್ಯದಲ್ಲಿ 7,661 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಗುಣಮುಖರ ಸಂಖ್ಯೆ 7.41 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳು ಮತ್ತಷ್ಟು ಇಳಿಕೆ ಕಂಡಿದ್ದು, ಸದ್ಯ 64,480 ಮಂದಿ ಸೋಂಕಿತರು ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇವರಲ್ಲಿ 935 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ.

ಶಾಸಕ ಟಿ.ವೆಂಕಟರಮಣಯ್ಯಗೆ ಕೋವಿಡ್‌(ದೊಡ್ಡಬಳ್ಳಾಪುರ ವರದಿ): ಶಾಸಕ ಟಿ.ವೆಂಕಟರಮಣಯ್ಯ ಅವರಿಗೆ ಕೋವಿಡ್‌-19 ದೃಢಪಟ್ಟಿದ್ದು, ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದಾರೆ.

ಕೋವಿಡ್‌ ದೃಢಪಟ್ಟ ವಿಷಯವನ್ನು ತಿಳಿಸಿದ ಅವರು, ‘ಉಪಚುನಾವಣಾ ಪ್ರಚಾರಕ್ಕಾಗಿ ತಿರುಗಾಡಿದ್ದರಿಂದ ಸೋಂಕು ತಗುಲಿರಬಹುದು. ವೈದ್ಯರು ಮನೆಯಲ್ಲಿಯೇ 15 ದಿನಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು