ಗದಗ: 16 ಶಿಕ್ಷಕರಿಗೆ ಕೋವಿಡ್ ಪಾಸಿಟಿವ್

ಗದಗ/ ಕಾರವಾರ: ಗದಗ ಜಿಲ್ಲೆಯಲ್ಲಿ 10 ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ 6 ಶಿಕ್ಷಕರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ.
‘ಸೋಂಕಿತರನ್ನು 14 ದಿನಗಳಿಗೆ ಕ್ವಾರಂಟೈನ್ ಮಾಡಲಾಗಿದೆ. ಇವರ ಜೊತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ 7 ಶಿಕ್ಷಕರಿಗೆ ಹೋಂ ಕ್ವಾರಂಟೈನ್ ಮಾಡಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಶ್ವರಿ ಕುಡಚಿ ತಿಳಿಸಿದರು.
ಕಾರವಾರ ಶೈಕ್ಷಣಿಕ ಜಿಲ್ಲೆ ಯಲ್ಲಿ ತರಗತಿಗಳ ಪುನರಾ ರಂಭಕ್ಕೂ ಮೊದಲು ನಡೆದ ಆರೋಗ್ಯ ಪರೀಕ್ಷೆಯಲ್ಲಿ ಮೂವರು ಶಿಕ್ಷಕರಿಗೆ ಕೋವಿಡ್ ದೃಢಪಟ್ಟಿದೆ.
‘ಅಂಕೋಲಾ, ಹೊನ್ನಾವರ ಮತ್ತು ಭಟ್ಕಳ ತಾಲ್ಲೂಕುಗಳಲ್ಲಿ ತಲಾ ಒಬ್ಬರು ಶಿಕ್ಷಕರು ಸೋಂಕಿತರಾಗಿದ್ದಾರೆ’ ಎಂದು ಡಿಡಿಪಿಐ ಹರೀಶ ಗಾಂವ್ಕರ್ ನುಡಿದರು.
ಶಿರಸಿ ಶೈಕ್ಷಣಿಕ ಜಿಲ್ಲೆಯ ಹುಲೇ ಕಲ್, ಮಂಜುವಳ್ಳಿ, ದಾಸನಕೊಪ್ಪ ಶಾಲೆಯ ತಲಾ ಒಬ್ಬರು ಶಿಕ್ಷಕರಲ್ಲಿ ಸೋಂಕು ಕಾಣಿಸಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ವಿನಾಯಕ ಭಟ್ಟ ಹೇಳಿದರು.
ಹಾಸನ: ಮೂವರು ಶಿಕ್ಷಕರಿಗೆ ಕೋವಿಡ್
ಹಾಸನ: ಹಾಸನ ಜಿಲ್ಲೆಯಲ್ಲಿ ಮೂವರು ಶಿಕ್ಷಕರಿಗೆ ಕೋವಿಡ್–19 ದೃಢಪಟ್ಟಿದೆ. ನಾಲ್ಕು ದಿನಗಳ ಹಿಂದೆ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಸೋಂಕು ಇರುವುದು ಪತ್ತೆಯಾಗಿದೆ.
ಕೋವಿಡ್ ದೃಢಪಟ್ಟಿದ್ದ ಶಿಕ್ಷಕರು ಶಾಲೆಗೆ ಹಾಜರಾಗಿಲ್ಲ. ಹೀಗಾಗಿ, ಪೋಷಕರು ಹಾಗೂ ಮಕ್ಕಳು ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಡಿಪಿಐ ಕೆ.ಎಸ್.ಪ್ರಕಾಶ್ ತಿಳಿಸಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.