ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ದೃಢ ಪ್ರಮಾಣ ಶೇ 3.77ಕ್ಕೆ ಇಳಿಕೆ

Last Updated 17 ಜೂನ್ 2021, 20:34 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 5,983 ಮಂದಿ ಕೋವಿಡ್ ಪೀಡಿತರಾಗಿರುವುದು ಗುರುವಾರ ದೃಢಪಟ್ಟಿದೆ. ಬೆಂಗಳೂರು ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಮಾತ್ರ 500ಕ್ಕೂ ಅಧಿಕ ಹೊಸ ಪ್ರಕರಣಗಳು ವರದಿಯಾಗಿದ್ದು, 12 ಜಿಲ್ಲೆಗಳಲ್ಲಿ ಈ ಸಂಖ್ಯೆ ಎರಡಂಕಿಯಲ್ಲಿದೆ.

ಒಂದು ದಿನದ ಅವಧಿಯಲ್ಲಿ 1.58 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣವು ಶೇ 3.77ಕ್ಕೆ ಇಳಿಕೆಯಾಗಿದೆ. ಈ ಪ್ರಮಾಣವು ಕಳೆದ ತಿಂಗಳು ಈ ವೇಳೆ ಶೇ 40ಕ್ಕೆ ಏರಿಕೆಯಾಗಿತ್ತು. ಈ ತಿಂಗಳು 17 ದಿನಗಳಲ್ಲಿ 1.85 ಲಕ್ಷ ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 27.90 ಲಕ್ಷ ದಾಟಿದೆ.

ಕೊರೊನಾ ಸೋಂಕಿತರಲ್ಲಿ 138 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಮರಣ ಪ್ರಮಾಣ ದರವು ಶೇ 2.30ರಷ್ಟು ವರದಿಯಾಗಿದೆ. ರಾಜ್ಯದ 24 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ 26 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ.
ಬೆಂಗಳೂರಿನಲ್ಲಿ 17 ಮಂದಿ, ದಕ್ಷಿಣ ಕನ್ನಡ ಹಾಗೂ ದಾವಣಗೆರೆಯಲ್ಲಿ ತಲಾ 11 ಮಂದಿ ಸಾವಿಗೀಡಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ 10 ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಮರಣ ಪ್ರಕರಣಗಳು ವರದಿಯಾಗಿವೆ. ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 33,434ಕ್ಕೆ
ತಲುಪಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 1.46 ಲಕ್ಷಕ್ಕೆ ಇಳಿಕೆಯಾಗಿದೆ. ಸೋಂಕಿತರಲ್ಲಿ 10,685 ಮಂದಿಗೆ ಕಾಯಿಲೆ ವಾಸಿಯಾಗಿದೆ. ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 26.10 ಲಕ್ಷ ದಾಟಿದೆ.

ಬೆಂಗಳೂರಿನಲ್ಲಿ 1,209 ಮಂದಿ ಸೋಂಕಿತರಾಗಿರುವುದು ಖಚಿತಪಟ್ಟಿದೆ. ದಕ್ಷಿಣ ಕನ್ನಡದಲ್ಲಿ 679, ಮೈಸೂರಿನಲ್ಲಿ 596 ಪ್ರಕರಣಗಳು ವರದಿಯಾಗಿವೆ. ಬೀದರ್, ಬಾಗಲಕೋಟೆ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ರಾಮನಗರ, ಯಾದಗಿರಿಯಲ್ಲಿ 50ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಹೊಸ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT