ಶನಿವಾರ, ಮೇ 21, 2022
28 °C

29ರಿಂದ ಐಎಲ್‌ಐ, ಸಾರಿ ಪ್ರಕರಣಗಳ ಮನೆ ಮನೆ ಸಮೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ (ಐಎಲ್‌ಐ) ಮತ್ತು ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಪ್ರಕರಣಗಳ ಮನೆ ಮನೆ ಸಮೀಕ್ಷೆಯನ್ನು ಇದೇ 29ರಿಂದ 2022ರ ಜ.15ರವರೆಗೆ ನಡೆಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ. 

ಈ ಬಗ್ಗೆ ಇಲಾಖೆಯ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ. ‘ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಐಎಲ್‌ಐ, ಸಾರಿ ಪ್ರಕರಣಗಳ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. ಸಮೀಕ್ಷೆಯ ವರದಿಯನ್ನು ಉಪ ಕೇಂದ್ರಗಳ ಮಟ್ಟದಲ್ಲಿ ಐಎಚ್‌ಐಪಿ ತಂತ್ರಾಂಶದ ಎಸ್ ಅರ್ಜಿ ನಮೂನೆಯಲ್ಲಿ ಸಲ್ಲಿಸಬೇಕು’ ಎಂದು ತಿಳಿಸಿದ್ದಾರೆ. 

ನಾಲ್ಕು ಗಂಟೆ ಅವಧಿ: ಕೋವ್ಯಾಕ್ಸಿನ್ ಲಸಿಕೆಯ ಬಳಕೆ ಅವಧಿ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಸುತ್ತೋಲೆ ಹೊರಡಿಸಿದ್ದಾರೆ.

‘ಸೀಶೆಯ ಮುಚ್ಚಳ ತೆರೆದ ಬಳಿಕ 28 ದಿನಗಳ ವರೆಗೆ ಲಸಿಕೆ ವಿತರಿಸುವ ಬಗ್ಗೆ ಆಸ್ಪತ್ರೆಗಳು ಸ್ಪಷ್ಟೀಕರಣ ಕೇಳಿವೆ. ಲಸಿಕೆಯ ಸೀಶೆಯ ಮೇಲೆ ನಮೂದಿಸಿರುವ ಅವಧಿಯವರೆಗೆ ಮಾತ್ರ ಉಪಯೋಗಿಸಬೇಕು. ಒಂದು ಬಾರಿ ಮುಚ್ಚಳ ತೆಗೆದ ಬಳಿಕ 4 ಗಂಟೆಯೊಳಗೆ ವಿತರಿಸಬೇಕು’ ಎಂದು ಸೂಚಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು