ಗುರುವಾರ , ಮೇ 6, 2021
25 °C

ಚಾಮುಂಡೇಶ್ವರಿ ದೇಗುಲ– ಭಕ್ತರಿಗೆ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಕೋವಿಡ್‌–19 ಪ್ರಕರಣ ಹೆಚ್ಚುತ್ತಿರುವ ಕಾರಣ ಏ.21ರಿಂದ ಮೇ 4ರವರೆಗೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ರಾಜ್ಯದಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಮೇ 4ರ ಬೆಳಿಗ್ಗೆ 6 ಗಂಟೆವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ. ಭಕ್ತರು ಸಹಕರಿಸುವಂತೆ ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಯತಿರಾಜ್‌ ಮನವಿ ಮಾಡಿದ್ದಾರೆ.

ಆನ್‌ಲೈನ್‌ ಸೇವಾ ಮಾಹಿತಿಗೆ http://chamundeshwaritemple.in ಭೇಟಿ ನೀಡಬಹುದು.

ಮಾದಪ್ಪನ ಕ್ಷೇತ್ರ ಬಂದ್‌: ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಮೇ 4ರ ಬೆಳಿಗ್ಗೆ 6 ಗಂಟೆಯವರೆಗೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ಆನ್‌ಲೈನ್‌ನಲ್ಲಿ ಸೇವೆಗಳನ್ನು‌ ಕಾಯ್ದಿರಿಸಲು www.mmhillstemple.comಗೆ ಭೇಟಿ ನೀಡಬಹುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು