ಶನಿವಾರ, ಡಿಸೆಂಬರ್ 4, 2021
24 °C

ಕೋವಿಡ್‌ ನಿಯಮ ಸರಳೀಕರಣ ಶೀಘ್ರ: ಸಿಎಂ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ದಾವಣಗೆರೆ: ಕೋವಿಡ್‌ ನಿಯಂತ್ರಣದಲ್ಲಿ ಇರುವುದರಿಂದ ಕೋವಿಡ್‌ ನಿಯಮಗಳನ್ನು ಶೀಘ್ರದಲ್ಲಿ ಸರಳೀಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಹೇಳಿದರು.

ಹೊನ್ನಾಳಿ ತಾಲ್ಲೂಕು ಎಚ್‌ . ಕಡದಕಟ್ಟೆಯ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರ ಜತೆಗೆ ಅವರು ಮಾತನಾಡಿದರು.

ಎರಡು ದಿನಗಳಲ್ಲಿ ತಜ್ಞ ರ ಜೊತೆ ಚರ್ಚೆ ನಡೆಸಲಾಗುವುದು. ಗಡಿ ಜಿಲ್ಲೆಗಳಲ್ಲಿ ಕೂಡ ಕೊರೊನಾ ಪ್ರಮಾಣ ಕಡಿಮೆಯಾಗಿದೆ. ಶಾಲೆ ಸೇರಿದಂತೆ ವಿವಿಧ ವಿಚಾರಗಳ  ಬಗ್ಗೆ ಚಿಂತನೆ ಮಾಡಿ ಸರಳೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬೆಂಗಳೂರು ವಿಕ್ಟೋರಿ ಆಸ್ಪತ್ರೆಯಲ್ಲಿ ಬೆಡ್ ಸಮಸ್ಯೆ ವಿಚಾರದ ಬಗ್ಗೆ ಸಂಬಂಧಿಸಿದವರ ಜೊತೆ ಮಾತಾಡಿದ್ದೇನೆ. ಎಲ್ಲವೂ ಸರಿಯಾಗಲಿದೆ ಎಂದು ತಿಳಿಸಿದರು. 

ಬಿ.ಎಸ್‌. ಯಡಿಯೂರಪ್ಪ ಅವರು ಸಿಂದಗಿ ಮತ್ತು ಹಾನಗಲ್‌ ಉಪ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಅದಕ್ಕೆ ದಿನಾಂಕ ಕೂಡ ನಿಗದಿಯಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ಸಿ.ಎಂ. ಇಬ್ರಾಹಿಂಗೆ ಎಲ್ಲಿ ಜ್ಞಾನೋದಯವಾಯಿತು ಎಂಬುದು ಗೊತ್ತಿಲ್ಲ ಎಂದು ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು