ಗುರುವಾರ , ಮೇ 13, 2021
22 °C

ಕೋವಿಡ್‌: ಎರಡನೇ ಬಾರಿ ಕೆ–ಸೆಟ್‌ ಪರೀಕ್ಷೆ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ರಾಜ್ಯದ 11 ಕೇಂದ್ರಗಳಲ್ಲಿ ಭಾನುವಾರ (ಏ.25) ನಿಗದಿಯಾಗಿದ್ದ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನು (ಕೆ–ಸೆಟ್‌) ಮುಂದೂಡಲಾಗಿದೆ.

ಪರೀಕ್ಷೆಗೆ ಎಲ್ಲ ಸಿದ್ಧತೆಗಳನ್ನು ಮಾಡಲಾಗಿತ್ತು. ಆದರೆ ವಾರಾಂತ್ಯ ಕರ್ಫ್ಯೂ ಇರುವ ಕಾರಣದಿಂದಾಗಿ ಪರೀಕ್ಷೆ ಮುಂದೂಡಲಾಗಿದೆ. 

ಮುಂದಿನ ದಿನಾಂಕವನ್ನು ಕೆ–ಸೆಟ್‌ ವೆಬ್‌ಸೈಟ್‌ನಲ್ಲಿ (http://kset.uni-mysore.ac.in) ಪ್ರಕಟಿಸಲಾಗುವುದು’ ಎಂದು ಮೈಸೂರು ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಸಾರಿಗೆ ನೌಕರರ ಮುಷ್ಕರದ ಕಾರಣ ಏ.11ರಂದು ನಡೆಯಬೇಕಿದ್ದ ಕೆ–ಸೆಟ್‌ ಪರೀಕ್ಷೆಯನ್ನು ಏ.25ಕ್ಕೆ ಮುಂದೂಡಲಾಗಿತ್ತು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು