ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಫ್‌ಲೈನ್‌ ತರಗತಿ ನಿಲ್ಲದು, ಪರೀಕ್ಷೆಗಳಲ್ಲಿ ಬದಲಾವಣೆ ಇಲ್ಲ: ಅಶ್ವತ್ಥನಾರಾಯಣ

ಸಿಎಂ, ಉನ್ನತ ಮಟ್ಟದ ಅಧಿಕಾರಿಗಳ ಜತೆ ಸಮಾಲೋಚನೆ
Last Updated 23 ಮಾರ್ಚ್ 2021, 7:27 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಕಾರಣಕ್ಕೆ ಪದವಿ ಕೋರ್ಸ್‌ಗಳ ಆಫ್‌ಲೈನ್‌ ತರಗತಿಗಳು ನಿಲ್ಲುವುದಿಲ್ಲ ಹಾಗೂ ಪರೀಕ್ಷೆಗಳು ಕೂಡ ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದರು.

ಕೋವಿಡ್‌ ಎರಡನೇ ಅಲೆ ಹಿನ್ನೆಲೆಯಲ್ಲಿ ಸದ್ಯಕ್ಕೆ ಉನ್ನತ ಶಿಕ್ಷಣ ವಿಭಾಗದ ಪರಿಸ್ಥಿತಿಯನ್ನು ಅವಲೋಕನ ನಡೆಸಿದಅಶ್ವತ್ಥನಾರಾಯಣ ಅವರು, ‘ವಿವಿಧ ವಿಶ್ವವಿದ್ಯಾಲಯಗಳಲ್ಲಿ ಮತ್ತು ಕಾಲೇಜುಗಳಲ್ಲಿ ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳು ನಡೆಯಲಿವೆ. ಸರ್ಕಾರ ಹೊರಡಿಸಿರುವ ಮಾದರಿ ವೇಳಾಪಟ್ಟಿಯಂತೆ ವಿಶ್ವವಿದ್ಯಾಲಯಗಳು ನಿಗದಿಪಡಿಸಿರುವ ವೇಳಾಪಟ್ಟಿ ಅನುಸಾರ ಹಾಲಿ ನಡೆಯುತ್ತಿರುವ ಆಫ್‌ಲೈನ್‌ ತರಗತಿಗಳನ್ನು ಹಾಗೆಯೇ ಮುಂದುವರಿಸಲಾಗುವುದು’ ಎಂದರು.

ಈ ಸಂದರ್ಭದಲ್ಲಿ ಕೋವಿಡ್‌ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಲು ಎಲ್ಲಾ ವಿಶ್ವವಿದ್ಯಾಲಯಗಳಿಗೆ ಹಾಗೂ ಮಹಾವಿದ್ಯಾಲಯಗಳಿಗೆ ಸೂಚನೆ ನೀಡಲಾಯಿತು ಎಂದು ಡಿಸಿಎಂ ಅವರು ಮಾಹಿತಿ ನೀಡಿದರು.

ವಿಶ್ವವಿದ್ಯಾಲಯಗಳು, ಕಾಲೇಜುಗಳು, ಪಾಲಿಟೆಕ್ನಿಕ್‌ಗಳು ಮತ್ತು ಇನ್ನಿತರೆ ಶಿಕ್ಷಣ ಸಂಸ್ಥೆಗಳಲ್ಲಿ 2020-21ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಎರಡನೇ ಅಲೆ ಬೀರುವ ಪರಿಣಾಮಗಳ ಮಹತ್ವದ ಸಮಾಲೋಚನೆ ನಡೆಸಿದ್ದೇನೆ. ಮುಖ್ಯಮಂತ್ರಿ ಜತೆಗೂ ಚರ್ಚಿಸಿದ್ದೇನೆ. ಎಲ್ಲಾ ವಿಶ್ವವಿದ್ಯಾಲಯಗಳಿಂದ ಪಡೆದ ಮಾಹಿತಿಯನ್ನು ಪರಾಮರ್ಶಿಸಲಾಯಿತು ಎಂದರು.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯಡಿಯಲ್ಲಿ ನಡೆಸುತ್ತಿರುವ ಹಾಸ್ಟೆಲ್‌ಗಳನ್ನು ಮುಂದುವರಿಸಲು ಆಯಾ ಇಲಾಖೆಗಳನ್ನು ಕೋರಲಾಗುವುದು. ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳಲ್ಲಿ, ಮಹಾವಿದ್ಯಾಲಯಗಳಲ್ಲಿ ಹಾಗೂ ಹಾಸ್ಟೆಲ್‌ಗಳಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಡಿಸಿಎಂ ಸೂಚಿಸಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರನಾಯಕ್‌, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಡಾ.ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ ಜೋಷಿ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್‌ ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT