ಬುಧವಾರ, ಜನವರಿ 19, 2022
23 °C

ಕೋವಿಡ್ ಪರೀಕ್ಷೆ ಹೆಸರಲ್ಲಿ ಶೋಷಣೆ: ಡಿಕೆಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದ ಗಡಿ ಭಾಗಗಳು ಮತ್ತು ವಿಮಾನ ನಿಲ್ದಾಣಗಳಲ್ಲಿ ಕೋವಿಡ್‌ ಪರೀಕ್ಷೆಯ ಹೆಸರಿನಲ್ಲಿ ಜನರ ಶೋಷಣೆ ನಡೆಯುತ್ತಿದೆ. ವಿದೇಶದಿಂದ ಬಂದವರಿಂದ ₹ 3,000 ವಸೂಲಿ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆರೋಪಿಸಿದರು.

ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ಜಗತ್ತಿನ ಯಾವ ರಾಷ್ಟ್ರದಲ್ಲೂ ಕೋವಿಡ್‌ ಪರೀಕ್ಷೆಗೆ ಇಷ್ಟೊಂದು ದುಬಾರಿ ಶುಲ್ಕ ವಿಧಿಸುತ್ತಿಲ್ಲ. ಈಗಾಗಲೇ ಜನರು ಆರ್ಥಿಕ ಸಂಕಷ್ಟದಿಂದ ನೊಂದಿದ್ದಾರೆ. ಮತ್ತೆ ಈಗ ಸರ್ಕಾರವೇ ದುಬಾರಿ ಶುಲ್ಕ ವಿಧಿಸಿ ಅವರನ್ನು ಕಾಡಬಾರದು’ ಎಂದರು.

ಕೋವಿಡ್‌ ನಿಯಂತ್ರಣಕ್ಕೆ ಕೇರಳದ ಗಡಿ ಭಾಗಗಳಲ್ಲಿ ಎಚ್ಚರಿಕೆ ವಹಿಸಿದರೆ ಸಾಲದು. ರಾಜ್ಯದಾದ್ಯಂತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ವೈಜ್ಞಾನಿಕವಾಗಿ ಜಾರಿಯಲ್ಲಿರುವ ಮಾರ್ಗಸೂಚಿಗಳನ್ನು ರಾಜ್ಯದಲ್ಲಿ ಪಾಲಿಸಬೇಕು. ಜನರನ್ನು ಗಾಬರಿಗೊಳಿಸಬಾರದು ಎಂದು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.