ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರನೇ ಅಲೆ ದೊಡ್ಡ ಸವಾಲು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Last Updated 3 ಜನವರಿ 2022, 19:17 IST
ಅಕ್ಷರ ಗಾತ್ರ

ಬೆಂಗಳೂರು:‘ಕೋವಿಡ್‌ ಮೂರನೇ ಅಲೆ ದೊಡ್ಡ ಸವಾಲು. ಎರಡು ಅಲೆಗಳನ್ನು ನಿಭಾಯಿಸಿರುವ ಅನುಭವದ ಆಧಾರದಲ್ಲಿ ಇದನ್ನು ವಿಭಿನ್ನವಾಗಿ ನಿಭಾಯಿಸಬೇಕಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರು ನಗರದ ಮೂಡಲಪಾಳ್ಯದ ಭೈರವೇಶ್ವರನಗರದ ಬಿಬಿಎಂಪಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಸ್ನಾತಕೋತ್ತರ ಕಾಲೇಜಿನಲ್ಲಿ 15ರಿಂದ 18 ವರ್ಷದ ಒಳಗಿನ ಶಾಲಾ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,‘2022ನೇ ವರ್ಷವನ್ನು ಆರೋಗ್ಯಭರಿತ ಹಾಗೂ ಕೋವಿಡ್ ಮುಕ್ತ ವರ್ಷವನ್ನಾಗಿ ಮಾಡಲು ಸಂಕಲ್ಪ ಕೈಗೊಳ್ಳಬೇಕು. ಬೆಳೆಯುತ್ತಿರುವ ಆರ್ಥಿಕತೆಯನ್ನು ಗಮನದಲ್ಲಿರಿಸಿಕೊಂಡು, ಕೋವಿಡ್ ಹರಡದಂತೆ ಕಠಿಣ ಕ್ರಮಗಳನ್ನು ಕೈಗೊಂಡು ಮುನ್ನಡೆಯಬೇಕಿದೆ’ ಎಂದು ಹೇಳಿದರು.

‘ಕಳೆದ ಒಂದು ವಾರದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನೆರೆಯ ರಾಜ್ಯಗಳಲ್ಲಿ ಕೋವಿಡ್‌ ವ್ಯಾಪಕವಾಗಿ ಹಬ್ಬುತ್ತಿದೆ. ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಹೀಗಾಗಿ, ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಕೋವಿಡ್ ಎದುರಿಸಲು ಆರೋಗ್ಯ ಇಲಾಖೆಯಲ್ಲಿಯೂ ಆಮೂಲಾಗ್ರ ಬದಲಾವಣೆಗಳನ್ನು ತರಲಾಗಿದ್ದು, ತಳಮಟ್ಟದಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT