ಭಾನುವಾರ, ಅಕ್ಟೋಬರ್ 25, 2020
27 °C

ಸಂಸದ ಉಮೇಶ ಜಾಧವ, ಶಾಸಕ ಅವಿನಾಶ್‌ಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಗುಲಬರ್ಗಾ ಕ್ಷೇತ್ರದ ಸಂಸದ ಡಾ.ಉಮೇಶ ಜಾಧವ ಹಾಗೂ ಅವರ ಪುತ್ರ, ಚಿಂಚೋಳಿ ಶಾಸಕ ಡಾ.ಅವಿನಾಶ‌ ಜಾಧವ ಅವರಿಗೆ ಕೋವಿಡ್–19 ಸೋಂಕು ಇರುವುದು ದೃಢಪಟ್ಟಿದೆ. 

ಈ ಕುರಿತು ‘ಪ್ರಜಾವಾಣಿ’ಗೆ ಕರೆ ಮಾಡಿ ಮಾಹಿತಿ ನೀಡಿರುವ ಸಂಸದ ಡಾ. ಜಾಧವ, ವೈದ್ಯಕೀಯ ಪರೀಕ್ಷೆಗೆ ಒಳಪಟ್ಟಾಗ ಸೋಂಕು ತಗುಲಿರುವುದು ಗೊತ್ತಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನ ಬೌರಿಂಗ್ ಸರ್ಕಾರಿ ಆಸ್ಪತ್ರೆಗೆ ಇಬ್ಬರೂ ದಾಖಲಾಗಿದ್ದೇವೆ. ಈ ಸೋಂಕನ್ನು ಗೆದ್ದು ಬರುತ್ತೇವೆ. ಕ್ಷೇತ್ರದ ಜನತೆ ಆತಂಕ ‍ಪಡಬೇಕಿಲ್ಲ’ ಎಂದು ತಿಳಿಸಿದ್ದಾರೆ.

ಆಗಸ್ಟ್ 16ರಂದು ಸೇಡಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದರು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೇರಿದಂತೆ ಹಲವು ಶಾಸಕರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು