ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2ನೇ ಡೋಸ್: 25 ಜಿಲ್ಲೆಗಳು ಗುರಿ ಸಾಧನೆ

Last Updated 16 ಜೂನ್ 2022, 15:58 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿನ18 ವರ್ಷಗಳು ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆಯ ಎರಡನೆ ಡೋಸ್ ನೀಡುವಿಕೆಯಲ್ಲಿ 25 ಜಿಲ್ಲೆಗಳು ಶೇ 100 ರಷ್ಟುಗುರಿ ತಲುಪಿವೆ.

ಆರೋಗ್ಯ ಇಲಾಖೆಯುರಾಜ್ಯದಲ್ಲಿ 18 ವರ್ಷಗಳು ಮೇಲ್ಪಟ್ಟ4.89 ಕೋಟಿ ಮಂದಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹಾಕಿಕೊಂಡಿತ್ತು. ಈಗಾಗಲೇ 4.98 ಕೋಟಿ ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಈ ಮೂಲಕ ಶೇ 102 ರಷ್ಟು ಗುರಿ ಸಾಧನೆ ಮಾಡಲಾಗಿದೆ. 4.93 ಕೋಟಿ ಮಂದಿ (ಶೇ 101) ಎರಡನೇ ಡೋಸ್ ಲಸಿಕೆ ಹಾಕಿಸಿಕೊಂಡಿದ್ದಾರೆ.

ಬೆಂಗಳೂರು ನಗರ, ರಾಯಚೂರು, ದಕ್ಷಿಣ ಕನ್ನಡ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಯು ಎರಡನೇ ಡೋಸ್ ನೀಡುವಿಕೆಯಲ್ಲಿ ರಾಜ್ಯದ ಸರಾಸರಿಗಿಂತ ಹಿಂದುಳಿದಿವೆ. ಕೋಲಾರ ಶೇ 107 ರಷ್ಟು ಗುರಿ ಸಾಧನೆ ಮಾಡಿದೆ.

ರಾಜ್ಯದಲ್ಲಿ 2021 ಜ.16ರಂದು ಲಸಿಕೆ ವಿತರಣಾ ಅಭಿಯಾನಕ್ಕೆ ಚಾಲನೆ ದೊರೆತಿದೆ. ಆರೋಗ್ಯ ಕಾರ್ಯಕರ್ತರಲ್ಲಿ 7,58,637, ಕೋವಿಡ್ ಮುಂಚೂಣಿ ಯೋಧರಲ್ಲಿ 9,42,835 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ ಕ್ರಮವಾಗಿ 4,38,386 ಹಾಗೂ 3,62,458 ಮಂದಿ ಮುನ್ನೆಚ್ಚರಿಕೆ ಡೋಸ್ ಹಾಕಿಸಿಕೊಂಡಿದ್ದಾರೆ.

12ರಿಂದ 14 ವರ್ಷದವರಲ್ಲಿ 13,39,337, 15ರಿಂದ 17 ವರ್ಷದವರಲ್ಲಿ 23,58,093 ಹಾಗೂ 18ರಿಂದ 44 ವರ್ಷದವರಲ್ಲಿ 2,87,41,890 ಮಂದಿ ಎರಡನೇ ಡೋಸ್ ಪಡೆದುಕೊಂಡಿದ್ದಾರೆ. 45 ವರ್ಷಗಳು ಮೇಲ್ಪಟ್ಟವರಲ್ಲಿ 1,89,26,432 ಮಂದಿಗೆ ಎರಡು ಡೋಸ್ ಲಸಿಕೆ ನೀಡಲಾಗಿದೆ.

18ರಿಂದ 60 ವರ್ಷದವರಲ್ಲಿ 2,35,641 ಹಾಗೂ 60 ವರ್ಷಗಳು ಮೇಲ್ಪಟ್ಟವರಲ್ಲಿ 17,79,162 ಮಂದಿ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.ರಾಜ್ಯದಲ್ಲಿ ಸದ್ಯ3,222 ಸರ್ಕಾರಿ ಆರೋಗ್ಯ ಕೇಂದ್ರಗಳು ಸೇರಿದಂತೆ3,372 ಕಡೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT