ಲಸಿಕೆ ಪಡೆಯದವರಿಗೂ ಪಡಿತರ, ಪಿಂಚಣಿ ಸೌಲಭ್ಯ: ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್

ಬೆಂಗಳೂರು: ಕೋವಿಡ್ ಲಸಿಕೆ ಪಡೆಯದವರಿಗೂ ಪಡಿತರ, ಪಿಂಚಣಿ ಮುಂತಾದ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ತಿಳಿಸಿದ್ದಾರೆ.
ಲಸಿಕೆ ನೀಡುವುದಕ್ಕೂ ಪಡಿತರ, ಪಿಂಚಣಿ ವಿತರಣೆ ಕಾರ್ಯಕ್ರಮಗಳಿಗೂ ಸಂಬಂಧವಿಲ್ಲ. ಒಂದು ವೇಳೆ ಲಸಿಕಾ ಕಾರ್ಯಕ್ರಮವನ್ನು ಇತರ ಸಾಮಾಜಿಕ ಕಾರ್ಯಕ್ರಮಗಳಿಗೆ ತಪ್ಪಾಗಿ ಜೋಡಿಸಿದ್ದರೆ ಕೈಬಿಡಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.