ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಲಸಿಕೆ ವಿತರಣೆಗೆ ವೇಗ

ಈ ತಿಂಗಳು ‍ಪ್ರತಿನಿತ್ಯ ಸರಾಸರಿ 4.31 ಲಕ್ಷ ಡೋಸ್‌ಗಳು ವಿತರಣೆ
Last Updated 8 ಜನವರಿ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಲಸಿಕಾ ಅಭಿಯಾನಕ್ಕೆ ವೇಗ ನೀಡಲಾಗಿದೆ. ಈ ತಿಂಗಳು ‍ಪ್ರತಿನಿತ್ಯ ಸರಾಸರಿ 4.31 ಲಕ್ಷ ಡೋಸ್‌ಗಳಷ್ಟು ಲಸಿಕೆ ವಿತರಿಸಲಾಗಿದೆ.

5 ಸಾವಿರಕ್ಕೂ ಅಧಿಕ ಕೇಂದ್ರಗಳಲ್ಲಿ ಪ್ರತಿನಿತ್ಯ ಲಸಿಕೆ ನೀಡಲಾಗುತ್ತಿದೆ. 15ರಿಂದ 17 ವರ್ಷದವರಿಗೆ ಶಾಲಾ–ಕಾಲೇಜುಗಳಲ್ಲಿ ಲಸಿಕೆ ಹಾಕಲಾಗುತ್ತಿದೆ. ಈ ವಯೋಮಾನದವರಲ್ಲಿ 15.51 ಲಕ್ಷ ಮಂದಿ ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ.

ಇದೇ 10ರಿಂದ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಅಸ್ವಸ್ಥತೆ ಹೊಂದಿರುವ 60 ವರ್ಷಗಳು ಮೇಲ್ಪಟ್ಟವರಿಗೆ ಮೂರನೇ ಡೋಸ್ ಲಸಿಕೆ ವಿತರಣೆ ಪ್ರಾರಂಭವಾಗಲಿದೆ. ಎರಡನೇ ಡೋಸ್ ಪಡೆದು 9 ತಿಂಗಳಾದವರು ಮತ್ತೊಂದು ಡೋಸ್ ಪಡೆಯಲು ಅರ್ಹರಾಗಿರುತ್ತಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ 2021ರ ಜ.16ರಿಂದ ಲಸಿಕೆ ವಿತರಣೆ ಪ್ರಾರಂಭವಾದರೂ ದೈನಂದಿನ ಸರಾಸರಿ ಮಾರ್ಚ್‌ ತಿಂಗಳ ಬಳಿಕ ಲಕ್ಷದ ಗಡಿ ದಾಟಿತ್ತು. ಬಳಿಕ ಲಸಿಕೆ ವಿತರಣೆ ಏರುಗತಿ ಪಡೆದುಕೊಂಡಿತ್ತು. ಸೆಪ್ಟೆಂಬರ್ ತಿಂಗಳಲ್ಲಿ ಪ್ರತಿನಿತ್ಯ ಸರಾಸರಿ 4.83 ಲಕ್ಷ ಡೋಸ್‌ಗಳಷ್ಟು ಲಸಿಕೆಯನ್ನು ವಿತರಿಸಲಾಗಿದೆ. ಈಗ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಅಧಿಕ ಮಂದಿಗೆ ಲಸಿಕೆ ನೀಡಲಾಗುತ್ತಿದೆ.ರಾಜ್ಯದಲ್ಲಿ ಈವರೆಗೆ 8.95 ಕೋಟಿಗೂ ಅಧಿಕ ಡೋಸ್‌ಗಳು ಲಸಿಕೆ ವಿತರಿಸಲಾಗಿದೆ.

18 ರಿಂದ 44 ವರ್ಷದೊಳಗಿನವರಲ್ಲಿ 2.80 ಕೋಟಿಮಂದಿ ಮೊದಲ ಡೋಸ್ ಹಾಗೂ 2.19 ಕೋಟಿಮಂದಿ ಎರಡನೇ ಡೋಸ್ಲಸಿಕೆಪಡೆದುಕೊಂಡಿದ್ದಾರೆ. 45 ವರ್ಷ ಮೇಲ್ಪಟ್ಟವರಲ್ಲಿ 1.85 ಕೋಟಿಮಂದಿ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ. ಅವರಲ್ಲಿ 1.61 ಕೋಟಿಮಂದಿ ಎರಡೂ ಡೋಸ್‌ಗಳನ್ನು ಪಡೆದಿದ್ದಾರೆ.

ಆರೋಗ್ಯ ಕಾರ್ಯಕರ್ತರಲ್ಲಿ7.64 ಲಕ್ಷ ಹಾಗೂಕೋವಿಡ್ಮುಂಚೂಣಿ ಯೋಧರಲ್ಲಿ 9.43 ಲಕ್ಷ ಮಂದಿ ಮೊದಲ ಡೋಸ್ ಪಡೆದಿದ್ದಾರೆ. ಇವರಲ್ಲಿ ಕ್ರಮವಾಗಿ 7.23 ಲಕ್ಷ ಮಂದಿ ಹಾಗೂ 8.97 ಲಕ್ಷ ಮಂದಿ ಎರಡೂ ಡೋಸ್ಲಸಿಕೆಹಾಕಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT