ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 2.5 ಕೋಟಿಗಿಂತ ಹೆಚ್ಚು ಡೋಸ್‌ ಲಸಿಕೆ ವಿತರಣೆ: ಮೈಲಿಗಲ್ಲೆಂದ ಸುಧಾಕರ್

ಅಕ್ಷರ ಗಾತ್ರ

ಬೆಂಗಳೂರು:ಕೊರೊನಾ ಸೋಂಕು ತಡೆಗೆ ರಾಜ್ಯದಲ್ಲಿ ಸಾಗಿರುವ ಕೋವಿಡ್‌ ಲಸಿಕೆ ನೀಡುವ ಪ್ರಕ್ರಿಯೆಯಲ್ಲಿ ಮೈಲುಗಲ್ಲು ಸಾಧಿಸಿದ್ದೇವೆ ಎಂದು ಬಣ್ಣಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, 2.5 ಕೋಟಿಗೂ ಹೆಚ್ಚು ಕೋವಿಡ್‌ ಲಸಿಕೆಯ ಮೊದಲ ಡೋಸ್‌ ನೀಡಲಾಗಿದೆ ಎಂದು ಹೇಳಿದ್ದಾರೆ.

ಕೇವಲ 17 ದಿನಗಳಲ್ಲಿ 50 ಲಕ್ಷ ಡೋಸ್ ಲಸಿಕೆಯನ್ನು ನೀಡಲಾಗಿದೆ. 2.5 ಕೋಟಿ ಡೋಸ್ ಲಸಿಕೆ ವಿತರಿಸಿದ ದೇಶದ 5ನೇ ಮತ್ತು ದಕ್ಷಿಣ ಭಾರತದ ಮೊದಲ ರಾಜ್ಯ ಕರ್ನಾಟಕವಾಗಿದೆ ಎಂದು ಸುಧಾಕರ್‌ ಹೇಳಿದ್ದಾರೆ.

ರಾಜ್ಯದಲ್ಲಿ 2,06,01,462 ಮಂದಿಗೆ ಮೊದಲ ಡೋಸ್‌ ಮತ್ತು 45,20,506 ಮಂದಿಗೆ ಎರಡನೇ ಡೋಸ್‌ ಅನ್ನು ಯಶಸ್ವಿಯಾಗಿ ನೀಡಲಾಗಿದೆ. 8,207 ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಇವುಗಳಲ್ಲಿ 7,609 ಕೇಂದ್ರಗಳು ಸರ್ಕಾರಿಯಾಗಿವೆ. ಇನ್ನುಲಿದ 598 ಕೇಂದ್ರಗಳು ಖಾಸಗಿಯವು ಎಂದು ಕೆ.ಸುಧಾಕರ್‌ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಕಾಲೇಜು ಶಿಕ್ಷಣ ವಿಭಾಗವು ಶೇಕಡಾ 51.12ರಷ್ಟು ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕ ವೃಂದಕ್ಕೆ ಕೋವಿಡ್‌ ಲಸಿಕೆಗಳನ್ನು ನೀಡಿದೆ ಎಂದು ಉಪಮುಖ್ಯಮಂತ್ರಿ ಸಿಎನ್‌ ಅಶ್ವತ್ಥನಾರಾಯಣ ಶುಕ್ರವಾರ ತಿಳಿಸಿದ್ದಾರೆ.

ಜುಲೈ 8ರ ವೇಳೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪದವಿ ಕಾಲೇಜಿನಲ್ಲಿರುವ 62,255 ಸರ್ಕಾರಿ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳ ಪೈಕಿ 31,826 ಕೋವಿಡ್‌ ಲಸಿಕೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಅಶ್ವತ್ಥನಾರಾಯಣ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT