ಭಾನುವಾರ, ಜೂನ್ 26, 2022
21 °C

ರಾಜ್ಯಕ್ಕೆ 5.76 ಲಕ್ಷ ಡೋಸ್ ಕೋವಿಶೀಲ್ಡ್‌ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕೇಂದ್ರ ಸರ್ಕಾರವು ರಾಜ್ಯಕ್ಕೆ ಮಂಗಳವಾರ 5.76 ಲಕ್ಷ ಡೋಸ್ ‘ಕೋವಿಶೀಲ್ಡ್‌’ ಲಸಿಕೆ ಪೂರೈಸಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ‘ಕೇಂದ್ರ ಸರ್ಕಾರದಿಂದ ಈವರೆಗೆ ಒಟ್ಟು 1.14 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಪೂರೈಕೆಯಾಗಿದೆ. ರಾಜ್ಯ ಸರ್ಕಾರವು ನೇರವಾಗಿ ಉತ್ಪಾದನಾ ಕಂಪನಿಯಿಂದ 13.54 ಲಕ್ಷ ಡೋಸ್ ಲಸಿಕೆಯನ್ನು ಖರೀದಿಸಿದೆ’ ಎಂದು ತಿಳಿಸಿದ್ದಾರೆ.

ಲಸಿಕೆಯ ಕೊರತೆ ಕಾರಣ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ಒದಗಿಸಲಾಗುತ್ತಿದೆ. 18ರಿಂದ 44 ವರ್ಷದವರಿಗೆ ತಾತ್ಕಾಲಿಕವಾಗಿ ಲಸಿಕೆ ವಿತರಣೆ ಸ್ಥಗಿತ ಮಾಡಲಾಗಿದೆ. ಈ ವಯೋಮಿತಿಯಲ್ಲಿ ಬರುವ ಕೋವಿಡ್ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೆ 7.20 ಲಕ್ಷ ಆರೋಗ್ಯ ಕಾರ್ಯಕರ್ತರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಅವರಲ್ಲಿ 4.72 ಲಕ್ಷ ಆರೋಗ್ಯ ಕಾರ್ಯಕರ್ತರು ಎರಡನೇ ಡೋಸ್ ಪೂರ್ಣಗೊಳಿಸಿದ್ದಾರೆ. 45 ವರ್ಷ ಮೇಲ್ಪಟ್ಟವರಲ್ಲಿ 85.48 ಲಕ್ಷ ಮಂದಿ ಮೊದಲ ಡೋಸ್ ಹಾಗೂ 20.82 ಲಕ್ಷ ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.

18ರಿಂದ 44 ವರ್ಷದವರಲ್ಲಿ 11.90 ಲಕ್ಷ ಮಂದಿ ಮೊದಲ ಡೋಸ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಈವರೆಗೆ 1.38 ಕೋಟಿ ಡೋಸ್ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು