ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕರಿಗೆ ಲಸಿಕೆ ಒದಗಿಸಲು ಸೂಚನೆ

Last Updated 2 ಸೆಪ್ಟೆಂಬರ್ 2021, 16:43 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ 18 ವರ್ಷ ಮೇಲ್ಪಟ್ಟ ಕಟ್ಟಡ ಕಾರ್ಮಿಕರಿಗೆ ಕೋವಿಡ್ ಲಸಿಕಾ ಅಭಿಯಾನ ನಡೆಸಬೇಕು. 15 ಅಥವಾ ಅದಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಕಾರ್ಮಿಕರು ಇರುವಲ್ಲಿ ಹತ್ತಿರದ ನಿಗದಿತ ಖಾಸಗಿ ಸ್ಥಳಗಳನ್ನು ಗುರುತಿಸಿ, ಲಸಿಕೆ ವಿತರಣೆಗೆ ವ್ಯವಸ್ಥೆ ಮಾಡಬೇಕು’ ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಸೂಚಿಸಿದ್ದಾರೆ.

ಈ ಬಗ್ಗೆ ಅವರು ಸುತ್ತೋಲೆ ಹೊರಡಿಸಿದ್ದಾರೆ. ‘ಕಟ್ಟಡ ಕಾರ್ಮಿಕರು ಹೆಚ್ಚಾಗಿ ಕೋವಿಡ್ ಪೀಡಿತರಾಗುತ್ತಿದ್ದಾರೆ. ಸಂಭಾವ್ಯ ಮೂರನೇ ಅಲೆಯ ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರಿಗೆ ರಕ್ಷಣೆ ಒದಗಿಸಬೇಕಿದೆ. ಹೀಗಾಗಿ, ಖಾಸಗಿ ಆರೋಗ್ಯ ಸಂಸ್ಥೆಗಳೊಂದಿಗೆ ಕೈಜೋಡಿಸಿ, ಲಸಿಕಾ ಅಭಿಯಾನವನ್ನು ನಡೆಸಬೇಕು. ಕಾರ್ಮಿಕರು ಹಾಗೂ ಅವರ ಕುಟುಂಬದ ಅರ್ಹ ಫಲಾನುಭವಿಗಳ ಸಂಖ್ಯೆಗೆ ಅನುಗುಣವಾಗಿ ಕ್ರಿಯಾಯೋಜನೆ ರೂಪಿಸಬೇಕು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT