ಭಾನುವಾರ, ಏಪ್ರಿಲ್ 2, 2023
32 °C

ಲಸಿಕಾ ಮೇಳ: 12 ಲಕ್ಷ ಡೋಸ್‌ಗಳಷ್ಟು ಲಸಿಕೆ ದಾಸ್ತಾನು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆರೋಗ್ಯ ಇಲಾಖೆಯು ಶನಿವಾರ ಬೃಹತ್ ಕೋವಿಡ್ ಲಸಿಕಾ ಮೇಳವನ್ನು ರಾಜ್ಯದಾದ್ಯಂತ ಹಮ್ಮಿಕೊಂಡಿದೆ. ಸದ್ಯ ರಾಜ್ಯದಲ್ಲಿ 12 ಲಕ್ಷ ಡೋಸ್‌ಗಳಷ್ಟು ಲಸಿಕೆ ದಾಸ್ತಾನು ಇದೆ. 

ಎಲ್ಲ ಜಿಲ್ಲೆಗಳ ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಲಸಿಕೆಯನ್ನು ಪೂರೈಕೆ ಮಾಡಲಾಗಿದೆ. ಸದ್ಯ 8 ಲಕ್ಷ ಡೋಸ್‌ಗಳಷ್ಟು ಕೋವಿಶೀಲ್ಡ್ ಮತ್ತು 4 ಲಕ್ಷ ಡೋಸ್‌ಗಳಷ್ಟು ಕೋವ್ಯಾಕ್ಸಿನ್ ಲಸಿಕೆ ದಾಸ್ತಾನು ಇದೆ. ಎರಡನೆ ಮತ್ತು ಮುನ್ನೆಚ್ಚರಿಕೆ ಡೋಸ್ ಪಡೆಯುವವರಿಗೆ ಸರ್ಕಾರಿ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆಯನ್ನು ಒದಗಿಸಲಾಗುತ್ತದೆ. ಶನಿವಾರ ಗರಿಷ್ಠ ಫಲಾನುಭವಿಗಳಿಗೆ ಲಸಿಕೆ ಒದಗಿಸುವ ಗುರಿ ಹಾಕಿಕೊಳ್ಳಲಾಗಿದೆ. ಫಲಾನುಭವಿಗಳು ಇದರ ಲಾಭ ಪಡೆದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದೆ. 

ಕೋವಿಡ್ ಲಸಿಕೆ ವಿತರಣೆಯಲ್ಲಿ ರಾಜ್ಯವು ಗಮನಾರ್ಹ ಸಾಧನೆ ಮಾಡಿದೆ. ಒಟ್ಟು 12.1 ಕೋಟಿ ಡೋಸ್‌ಗಳಷ್ಟು ಲಸಿಕೆಯನ್ನು ಈವರೆಗೆ ವಿತರಿಸಲಾಗಿದೆ. ಮೊದಲ ಹಾಗೂ ಎರಡನೇ ಡೋಸ್ ವಿತರಣೆಯಲ್ಲಿ ನಿಗದಿತ ಗುರಿ ದಾಟಿದ್ದು, ಶೇ 102 ರಷ್ಟು ಸಾಧನೆ ಮಾಡಲಾಗಿದೆ. ಮುನ್ನೆಚ್ಚರಿಕೆ ಡೋಸ್ ವಿತರಣೆಯಲ್ಲಿ ಶೇ 21 ರಷ್ಟು ಗುರಿ ಸಾಧಿಸಲಾಗಿದೆ. 5.51 ಕೋಟಿಯಷ್ಟು ಮೊದಲ ಡೋಸ್, 5.53 ಕೋಟಿಯಷ್ಟು ಎರಡನೇ ಡೋಸ್ ಹಾಗೂ 1.08 ಕೋಟಿಯಷ್ಟು ಮುನ್ನೆಚ್ಚರಿಕೆ ಡೋಸ್ ವಿತರಿಸಲಾಗಿದೆ ಎಂದು ಇಲಾಖೆ ಹೇಳಿದೆ. 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು