ಗುರುವಾರ , ಜನವರಿ 20, 2022
15 °C

ಕೋವಿಡ್ ಲಸಿಕೆ: 7 ಕೋಟಿ ಡೋಸ್‌ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕೆಯ 2.94 ಲಕ್ಷ ಡೋಸ್‌ಗಳನ್ನು ಶನಿವಾರ ವಿತರಿಸಲಾಗಿದೆ. ಇದರೊಂದಿಗೆ ಈವರೆಗೆ ರಾಜ್ಯದಲ್ಲಿ ನೀಡಲಾದ ಒಟ್ಟು ಡೋಸ್‌ಗಳ ಸಂಖ್ಯೆ 7 ಕೋಟಿಯ ಗಡಿ ದಾಟಿದೆ. 

4.36 ಕೋಟಿ ಮಂದಿ ಲಸಿಕೆಯ ಮೊದಲ ಡೋಸ್ ಹಾಗೂ 2.65 ಕೋಟಿ ಮಂದಿ ಎರಡೂ ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ. ಈ ವರ್ಷದ ಅಂತ್ಯದೊಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡು ಡೋಸ್ ಲಸಿಕೆ ವಿತರಿಸುವ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ. 

2021ರ ಜ.16ರಂದು ರಾಜ್ಯದಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾಗಿದೆ. ಒಂದು ತಿಂಗಳಿಂದ ದಿನವೊಂದಕ್ಕೆ ಸರಾಸರಿ 4 ಲಕ್ಷ ಡೋಸ್‌ಗಳನ್ನು ನೀಡಲಾಗುತ್ತಿದೆ.

18 ರಿಂದ 44 ವರ್ಷದೊಳಗಿನವರಲ್ಲಿ 2.46 ಕೋಟಿ ಮಂದಿ ಮೊದಲ ಡೋಸ್ ಹಾಗೂ 1.25 ಕೋಟಿ ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. 45 ವರ್ಷ ಮೇಲ್ಪಟ್ಟವರಲ್ಲಿ 1.73 ಕೋಟಿ ಮಂದಿ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ. ಅವರಲ್ಲಿ 1.24 ಕೋಟಿ ಮಂದಿ ಎರಡೂ ಡೋಸ್‌ಗಳನ್ನು ಪಡೆದಿದ್ದಾರೆ.

ಆರೋಗ್ಯ ಕಾರ್ಯಕರ್ತರಲ್ಲಿ 7.64 ಲಕ್ಷ ಹಾಗೂ ಕೋವಿಡ್ ಮುಂಚೂಣಿ ಯೋಧರಲ್ಲಿ 9.42 ಲಕ್ಷ ಮಂದಿ ಮೊದಲ ಡೋಸ್ ಪಡೆದಿದ್ದಾರೆ. ಇವರಲ್ಲಿ ಕ್ರಮವಾಗಿ 6.93 ಲಕ್ಷ ಮಂದಿ ಹಾಗೂ 8.40 ಲಕ್ಷ ಮಂದಿ ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು