ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಸಿಕಾ ಮೇಳ; 15 ಲಕ್ಷ ಡೋಸ್ ಗುರಿ: ಆರೋಗ್ಯ ಇಲಾಖೆ

Last Updated 31 ಆಗಸ್ಟ್ 2021, 16:53 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಲಸಿಕಾ ಮೇಳ ಹಮ್ಮಿಕೊಳ್ಳಲಾಗಿದ್ದು, ಒಂದೇ ದಿನ 15 ಲಕ್ಷ ಮಂದಿಗೆ ಲಸಿಕೆ ವಿತರಿಸುವ ಗುರಿ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಜಾವೇದ್ ಅಖ್ತರ್ ತಿಳಿಸಿದ್ದಾರೆ.

ಈ ಬಗ್ಗೆ ಅವರು ಸುತ್ತೋಲೆ ಹೊರಡಿಸಿದ್ದಾರೆ. ‘ಪ್ರತಿ ಬುಧವಾರ ಲಸಿಕಾ ಮೇಳ ನಡೆಸಬೇಕು. ಉಳಿದ ದಿನ‍ಪ್ರತಿನಿತ್ಯ 6 ಲಕ್ಷ ಡೋಸ್‌ಗಳನ್ನು ವಿತರಿಸಬೇಕು. ಇದಕ್ಕೆ ಫಲಾನುಭವಿಗಳನ್ನು ಸಜ್ಜುಗೊಳಿಸಿ, ವಿವಿಧ ಇಲಾಖೆಗಳ ಸಹಕಾರ ಪಡೆದುಕೊಳ್ಳಬೇಕು’ ಎಂದು ಸೂಚಿಸಿದ್ದಾರೆ.

ಕಳೆದೊಂದು ವಾರದಿಂದರಾಜ್ಯದಲ್ಲಿ ಲಸಿಕಾ ಅಭಿಯಾನಕ್ಕೆ ವೇಗ ನೀಡಲಾಗಿದ್ದು,ಮಂಗಳವಾರ 5.68 ಲಕ್ಷ ಡೋಸ್‌ಗಳನ್ನು ನೀಡಲಾಗಿದೆ. ಈವರೆಗೆ 4.23 ಕೋಟಿ ಡೋಸ್‌ಗಳನ್ನು ವಿತರಿಸಲಾಗಿದೆ. 3.19 ಕೋಟಿ ಮಂದಿ ಮೊದಲ ಡೋಸ್ ಹಾಗೂ 1.03 ಕೋಟಿ ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. 5,642 ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ 6,069 ಕೇಂದ್ರಗಳಲ್ಲಿ ಲಸಿಕೆ ವಿತರಿಸಲಾಗುತ್ತಿದೆ. ಆಗಸ್ಟ್ ತಿಂಗಳಲ್ಲಿ ಪ್ರತಿನಿತ್ಯ ಸರಾಸರಿ 3 ಲಕ್ಷ ಡೋಸ್‌ಗಳನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT