ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಲಸಿಕೆ: ಆರೋಗ್ಯ ಕಾರ್ಯಕರ್ತರ ಕುಟುಂಬದ ಸದಸ್ಯರಿಗೆ ಆದ್ಯತೆ

Last Updated 8 ಜೂನ್ 2021, 17:59 IST
ಅಕ್ಷರ ಗಾತ್ರ

ಬೆಂಗಳೂರು: ಆರೋಗ್ಯ ಕಾರ್ಯಕರ್ತರ ಕುಟುಂಬದ ಸದಸ್ಯರನ್ನು ದುರ್ಬಲ ಗುಂಪಿನಡಿ ಗುರುತಿಸಿ, ಲಸಿಕೆ ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಸೂಚಿಸಿದ್ದಾರೆ.

ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದ್ದಾರೆ. ‘ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವವರು ಹಾಗೂ ಆರೋಗ್ಯ ಸೇವೆ ಒದಗಿಸುವವರನ್ನು ಮುಂಚೂಣಿ ಆರೋಗ್ಯ ಕಾರ್ಯಕರ್ತರು ಎಂದು ಗುರುತಿಸಲಾಗಿದೆ. ಅವರಿಗೆ ಕಳೆದ ಜ.16ರಿಂದಲೇ ಲಸಿಕೆಯನ್ನು ಒದಗಿಸಲಾಗುತ್ತಿದೆ. ಲಸಿಕೆಯನ್ನು ಈವರೆಗೂ ಪಡೆಯದವರು ಆದಷ್ಟು ಬೇಗ ಲಸಿಕೆ ಹಾಕಿಸಿಕೊಳ್ಳಬೇಕು. ಮೂರನೇ ಹಂತದಲ್ಲಿ ಅವರ ಕುಟುಂಬದ ಸದಸ್ಯರನ್ನು ದುರ್ಬಲ ಗುಂಪಿಗೆ ಸೇರ್ಪಡೆ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

‘ಆರೋಗ್ಯ ಕಾರ್ಯಕರ್ತರ ಕುಟುಂಬದವರೆಂದರೇ ಒಂದೇ ಸೂರಿನಡಿ ವಾಸಿಸುವ ಪತಿ/ಪತ್ನಿ, ಅತ್ತೆ, ಮಾವ, ತಂದೆ, ತಾಯಿ ಮತ್ತು 18ರಿಂದ 44 ವರ್ಷದವರೆಗಿನ ಮಕ್ಕಳು. ಇವರಿಗೆ ಲಸಿಕೆ ನೀಡಲು ಆದ್ಯತೆ ನೀಡಲಾಗುವುದು. ಆರೋಗ್ಯ ಕಾರ್ಯಕರ್ತರು ತಮ್ಮ ಕುಟುಂಬದವರು ಎಂದು ಪರಿಗಣಿಸಲು ನೀಡುವ ದಾಖಲಾತಿಯನ್ನು ಅವರು ಕಾರ್ಯನಿರ್ವಹಿಸುವ ಸಂಸ್ಥೆಯ ಮುಖ್ಯಸ್ಥರು ಪರಿಶೀಲಿಸಿ, ಪ್ರಮಾಣೀಕರಿಸಬೇಕು’ ಎಂದು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT