ಸೋಮವಾರ, ಜನವರಿ 24, 2022
29 °C

ರಾಜ್ಯದಲ್ಲಿನ 15ರಿಂದ 17 ವರ್ಷದವರೆಗಿನ 10.49 ಲಕ್ಷ ವಿದ್ಯಾರ್ಥಿಗಳಿಗೆ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿನ 15ರಿಂದ 17 ವರ್ಷದವರೆಗಿನ ವಿದ್ಯಾರ್ಥಿಗಳಲ್ಲಿ 10.49 ಲಕ್ಷ ಮಂದಿ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ. 

31.75 ಲಕ್ಷ ಮಂದಿ ಈ ವಯೋಮಿತಿಯವರಾಗಿದ್ದಾರೆ. ಇವರಲ್ಲಿ ಶೇ 30ಕ್ಕೂ ಅಧಿಕ ಮಂದಿ ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಬುಧವಾರ ಇಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ‘15ರಿಂದ 17 ವರ್ಷದವರಿಗೆ ಲಸಿಕೆ ನೀಡುವಲ್ಲಿ ರಾಜ್ಯವು ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. 15 ದಿನಗಳಲ್ಲಿ ಈ ವಯೋಮಿತಿಯ ಎಲ್ಲರಿಗೂ ಒಂದು ಡೋಸ್ ಲಸಿಕೆ ಹಾಕುವ ಗುರಿ ಹಾಕಿಕೊಳ್ಳಲಾಗಿದೆ’ ಎಂದು ತಿಳಿಸಿದರು. 

‘ಕೋವಿಡ್ ಮೂರನೇ ಅಲೆ ದೀರ್ಘ ಕಾಲ ಇರುವುದಿಲ್ಲ. 4ರಿಂದ 6 ವಾರಗಳು ಸೋಂಕು ಹೆಚ್ಚಾಗಿ ಹರಡುತ್ತದೆ. ಓಮೈಕ್ರಾನ್ ಸೋಂಕು ಶ್ವಾಸಕೋಶಕ್ಕೆ ಹೋಗುವುದು ಕಡಿಮೆ. ಅದು ಗಂಟಲಲ್ಲಿ ಮಾತ್ರ ಇರುತ್ತದೆ. ಹೀಗಾಗಿ, ಯಾರು ಆತಂಕ ಪಡಬೇಕಿಲ್ಲ’ ಎಂದು ಹೇಳಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು