ಮಂಗಳವಾರ, ಅಕ್ಟೋಬರ್ 19, 2021
22 °C

ಕೋವಿಡ್ ಲಸಿಕೆ: ಪರ್ಯಾಯ ದಿನಕ್ಕೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತ ಲಸಿಕಾ ಕಾರ್ಯಕ್ರಮಕ್ಕೆ ಐದು ದಿನಗಳು ಬಿಡುವು ನೀಡಿ, ಪರ್ಯಾಯ ದಿನಗಳನ್ನು ಗುರುತಿಸಬೇಕು ಎಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘವು ಸರ್ಕಾರಕ್ಕೆ ಆಗ್ರಹಿಸಿದೆ. 

ಈ ಬಗ್ಗೆ ಸಂಘವು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರಿಗೆ ಪತ್ರ ಬರೆದಿದೆ. ‘ಕೋವಿಡ್ ನಿಯಂತ್ರಣ ಸಂಬಂಧ ಇದೇ 10 ರಿಂದ 15ರವರೆಗೆ ಲಸಿಕಾ ಕಾರ್ಯಕ್ರಮ ನಡೆಸಲು ಆದೇಶಿಸಲಾಗಿದೆ. ದಸರಾ ಹಬ್ಬ ಇರುವುದರಿಂದ ಸತತ ಐದು ದಿನಗಳು ಬಿಡುವಿಲ್ಲದೇ ಲಸಿಕಾ ಕಾರ್ಯಕ್ರಮ ನಡೆಸುವುದು ಸಮಸ್ಯೆಯಾಗುತ್ತದೆ. ಹಾಗಾಗಿ, ಪರ್ಯಾಯ ದಿನಗಳನ್ನು ನಿಗದಿಪಡಿಸುವಂತೆ ಇಲಾಖೆಯ ವಿವಿಧ ವೃಂದದ ಸಂಘದವರು ಮನವಿ ಮಾಡಿದ್ದಾರೆ’ ಎಂದು ಪತ್ರದಲ್ಲಿ ಸಂಘದ ಅಧ್ಯಕ್ಷ ಆರ್. ಶ್ರೀನಿವಾಸ್ ತಿಳಿಸಿದ್ದಾರೆ.

‘ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ, ಇತರೆ ಕರ್ತವ್ಯದ ದಿನಗಳಂದು ಲಸಿಕಾ ಕಾರ್ಯಕ್ರಮ ನಡೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಆದೇಶ ನೀಡಬೇಕು’ ಎಂದು ಮನವಿ ಮಾಡಿಕೊಂಡಿದ್ದಾರೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು