ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 3,448 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನ ನಡೆದಿದ್ದು, 1.19 ಲಕ್ಷ ಮಂದಿಗೆ ಲಸಿಕೆ ವಿತರಣೆ ಮಾಡಲಾಗಿದೆ.

3,488 ಕಡೆ ಕೋವಿಡ್ ಲಸಿಕೆ ವಿತರಣೆಗೆ ಯೋಜನೆ ರೂಪಿಸಲಾಗಿತ್ತು. 40 ಕೇಂದ್ರಗಳಲ್ಲಿ ಕಾರಣಾಂತರಗಳಿಂದ ಲಸಿಕೆ ವಿತರಣೆ ನಡೆದಿಲ್ಲ. ಲಸಿಕೆ ಪಡೆದವರಲ್ಲಿ 88,780 ಲಕ್ಷ ಮಂದಿ ಹಿರಿಯ ನಾಗರಿಕರಾಗಿದ್ದಾರೆ. ಈವರೆಗೆ 21.30 ಲಕ್ಷ ಡೋಸ್ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗಿದೆ. 5.08 ಲಕ್ಷ ಆರೋಗ್ಯ ಕಾರ್ಯಕರ್ತರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಇವರಲ್ಲಿ 3.08 ಲಕ್ಷ ಮಂದಿ ಎರಡನೇ ಡೋಸ್ ಪೂರ್ಣಗೊಳಿಸಿದ್ದಾರೆ.

60 ವರ್ಷ ಮೇಲ್ಪಟ್ಟವರಲ್ಲಿ 8.70 ಲಕ್ಷ ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. 45ರಿಂದ 60 ವರ್ಷದೊಳಗಿನ ಕೋವಿಡೇತರ ಕಾಯಿಲೆ ಎದುರಿಸುತ್ತಿರುವವರಲ್ಲಿ 2.11 ಲಕ್ಷ ಮಂದಿ ಲಸಿಕೆ ಪಡೆದುಕೊಂಡಿದ್ದಾರೆ. ಕೋವಿಡ್ ಮುಂಚೂಣಿ ಯೋಧರಲ್ಲಿ 1.89 ಲಕ್ಷ ಮಂದಿ ಮೊದಲ ಡೋಸ್ ಪಡೆದಿದ್ದಾರೆ. ಅವರಲ್ಲಿ 41,360 ಮಂದಿ ಎರಡನೇ ಡೋಸ್ ಪೂರ್ಣಗೊಳಿಸಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.