ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಲಸಿಕೆ ಪಡೆದ ಬಳಿಕ ಜ್ವರ, ಮೈ–ಕೈ ನೋವು ಸಾಮಾನ್ಯ: ಆರೋಗ್ಯ ಇಲಾಖೆ

Last Updated 6 ಆಗಸ್ಟ್ 2021, 16:46 IST
ಅಕ್ಷರ ಗಾತ್ರ

ಬೆಂಗಳೂರು: ‘ಇತರ ಲಸಿಕೆಗಳಂತೆಯೇ ಕೋವಿಡ್ ಲಸಿಕೆ ಪಡೆದ ಬಳಿಕ ಕೂಡ ಜ್ವರ, ಮೈ–ಕೈ ನೋವು, ಲಸಿಕೆ ಪಡೆದ ಜಾಗದಲ್ಲಿ ಊತ ಸೇರಿದಂತೆ ಸೌಮ್ಯ ಅಡ್ಡ ಪರಿಣಾಮಗಳು ಕೆಲವರಿಗೆ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತದೆ’ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

‘ಕೋವಿಡ್‌ನಿಂದ ಸಂಭವಿಸಬಹುದಾದ ತೀವ್ರ ಅನಾರೋಗ್ಯ ಹಾಗೂ ಸಾವನ್ನು ಲಸಿಕೆಯು ತಡೆಯುತ್ತದೆ. ಲಸಿಕೆ ಪಡೆದ ಬಳಿಕ ಮೊಬೈಲ್‌ ಸಂಖ್ಯೆಗೆ ಸಂದೇಶ ರವಾನೆಯಾಗದಿದ್ದಲ್ಲಿ ಆತಂಕ ಪಡಬೇಕಾದ ಅಗತ್ಯವಿಲ್ಲ. ಸಹಾಯವಾಣಿ ಸಂಖ್ಯೆ 104ಕ್ಕೆ ಕರೆ ಮಾಡಿ, ಲಸಿಕೆ ಪಡೆದ ಕೇಂದ್ರದ ಮಾಹಿತಿ ನೀಡಿದರೆ ಕೇಂದ್ರದ ಸಿಬ್ಬಂದಿ ಸಂಬಂಧಪಟ್ಟ ಜಿಲ್ಲೆಯ ನಿಯಂತ್ರಣ ಕೊಠಡಿಗೆ ಮಾಹಿತಿ ರವಾನಿಸುತ್ತಾರೆ. ಬಳಿಕ ಸಮಸ್ಯೆಗೆ ಪರಿಹಾರ ದೊರೆಯಲಿದೆ’ ಎಂದು ಇಲಾಖೆ ಮಾಹಿತಿ ನೀಡಿದೆ.

‘ಜ್ವರ, ಉಸಿರಾಟದ ಸಮಸ್ಯೆ ಸೇರಿದಂತೆ ವಿವಿಧ ಕೋವಿಡ್ ಲಕ್ಷಣಗಳು ಗೋಚರಿಸಿದಾಗ ತಕ್ಷಣ ವೈದ್ಯರನ್ನು ಸಂಪರ್ಕಿಸಿ, ತಪಾಸಣೆ ಮಾಡಿಸಿಕೊಳ್ಳಬೇಕು. ಸ್ವಯಂ ಚಿಕಿತ್ಸೆಗೆ ಒಳಗಾಗಿ ಸಮಸ್ಯೆಯನ್ನು ಉಲ್ಬಣ ಮಾಡಿಕೊಳ್ಳಬಾರದು. ಏನು ಆಗದು ಎಂಬ ಮನೋಭಾವವೂ ಬೇಡ. ಆರಂಭದಲ್ಲಿಯೇ ಚಿಕಿತ್ಸೆ ಪಡೆದುಕೊಂಡಲ್ಲಿ ಅಪಾಯ ತಪ್ಪಿಸಲು ಸಾಧ್ಯ’ ಎಂದು ತಿಳಿಸಿದೆ

‘ಅನಗತ್ಯವಾಗಿ ಔಷಧಗಳನ್ನು ಖರೀದಿಸುವುದು, ಸಂಗ್ರಹಿಸಿ ಇಟ್ಟುಕೊಳ್ಳುವುದು ಮಾಡಬಾರದು. ವೈದ್ಯರ ಸಲಹೆ ಪಡೆದ ಬಳಿಕವಷ್ಟೇ ಮಾತ್ರೆಗಳನ್ನು ಸೇವಿಸಬೇಕು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಮಾಹಿತಿಗಳ ಸತ್ಯಾಸತ್ಯತೆಯನ್ನು ಅರಿಯದೆ ಯಾವುದೇ ನಿರ್ಧಾರ ಕೈಗೊಳ್ಳಬಾರದು. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT