ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವೆ ಬಹಿಷ್ಕರಿಸಿ ಪ್ರತಿಭಟಿಸಿದ ಸ್ಥಾನಿಕ ವೈದ್ಯರು

ಕೋವಿಡ್ ಅಪಾಯ ಭತ್ಯೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
Last Updated 7 ಅಕ್ಟೋಬರ್ 2021, 16:18 IST
ಅಕ್ಷರ ಗಾತ್ರ

ಬೆಂಗಳೂರು:ಕೋವಿಡ್ ಅಪಾಯ ಭತ್ಯೆ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿದ ಸ್ಥಾನಿಕ ವೈದ್ಯರು, ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಸೇವೆ ಬಹಿಷ್ಕರಿಸುವ ಮೂಲಕ ಪ್ರತಿಭಟಿಸಿದರು.

ತುರ್ತು ಚಿಕಿತ್ಸೆ, ತೀವ್ರ ನಿಗಾ ಘಟಕ (ಐಸಿಯು) ಸೇವೆ ಹಾಗೂ ಕೋವಿಡ್ ಚಿಕಿತ್ಸೆಯಲ್ಲಿರುವ ವೈದ್ಯರು ಎಂದಿನಂತೆ ಸೇವೆ ಸಲ್ಲಿಸಿದರು. ಹೀಗಾಗಿ, ಈ ಸೇವೆಗಳಲ್ಲಿ ವ್ಯತ್ಯಯವಾಗಲಿಲ್ಲ.

ರಾಜ್ಯದಲ್ಲಿ 5 ಸಾವಿರ ಸ್ಥಾನಿಕ ವೈದ್ಯರಿದ್ದು,ಕರ್ನಾಟಕ ಸ್ಥಾನಿಕ ವೈದ್ಯರ ಸಂಘದ ನೇತೃತ್ವದಲ್ಲಿ ವೈದ್ಯರು ಜಾಥಾ, ಬೀದಿ ನಾಟಕ ಹಾಗೂ ರಕ್ತದಾನ ಶಿಬಿರ ನಡೆಸುವ ಮೂಲಕ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಒತ್ತಾಯಿಸಿದರು.

ಸ್ಥಾನಿಕ ವೈದ್ಯರ ಮುಷ್ಕರದಿಂದಹೊರರೋಗಿ ವಿಭಾಗಗಳ (ಒಪಿಡಿ) ಸೇವೆಯಲ್ಲಿ ಕೆಲವೆಡೆ ವ್ಯತ್ಯಯವಾಗಿತ್ತು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರನ್ನು ಮೈಸೂರಿನಲ್ಲಿ ಭೇಟಿ ಮಾಡಿದ ಸ್ಥಾನಿಕ ವೈದ್ಯರು, ‘ಕೂಡಲೇ ಕೋವಿಡ್ ಅಪಾಯ ಭತ್ಯೆಯನ್ನು ಬಿಡುಗಡೆ ಮಾಡಬೇಕು.ಶೈಕ್ಷಣಿಕ ಶುಲ್ಕವನ್ನು 2018ರಂತೆ ಪುನರ್ ಪರಿಷ್ಕರಿಸಬೇಕು. ಕಿರಿಯ ವೈದ್ಯರು ಮತ್ತುಶಿಶಿಕ್ಷುಗಳಿಗೆ ಶಿಷ್ಯವೇತನವನ್ನು ಸಕಾಲಕ್ಕೆ ಪಾವತಿಸಬೇಕು’ ಎಂದು ಆಗ್ರಹಿಸಿದರು.

‘ಕೋವಿಡ್ ಅಪಾಯ ಭತ್ಯೆ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕ್ರಮಕೈಗೊಳ್ಳಲಾಗುವುದು ಎಂದು ಡಾ.ಕೆ. ಸುಧಾಕರ್ ಭರವಸೆ ನೀಡಿದ್ದಾರೆ. ಹೀಗಾಗಿ, ಮುಷ್ಕರವನ್ನು ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸಲಾಯಿತು. ಬೇಡಿಕೆಗಳ ಈಡೇರಿಕೆಗೆ ಸ್ವಲ್ಪ ದಿನ ಕಾಲಾವಕಾಶ ನೀಡಲಾಗುತ್ತದೆ. ಇಷ್ಟಾಗಿಯೂ ಕ್ರಮಕೈಗೊಳ್ಳದಿದ್ದರೆ ಮತ್ತೆ ಮುಷ್ಕರದ ಹಾದಿ ಹಿಡಿಯಬೇಕಾಗುತ್ತದೆ’ ಎಂದುಸಂಘದ ಅಧ್ಯಕ್ಷೆ ಡಾ. ನಮ್ರತಾ ಸಿ. ತಿಳಿಸಿದರು.

‘ಕೋವಿಡ್ ಪೀಡಿತರಿಗೆಗುಣಮಟ್ಟದ ಚಿಕಿತ್ಸೆ ನೀಡಿ, ಸಾವಿನ ಪ್ರಮಾಣ ತಗ್ಗಿಸುವಲ್ಲಿಸ್ಥಾನಿಕವೈದ್ಯರುತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಸರ್ಕಾರ ಕೂಡಲೇ ಕೋವಿಡ್ ಅಪಾಯ ಭತ್ಯೆ ಬಿಡುಗಡೆಗೊಳಿಸಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT