ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಮತ್ತೆ 50 ಶಿಕ್ಷಕರಿಗೆ ಕೋವಿಡ್

Last Updated 8 ಜನವರಿ 2021, 19:09 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಮತ್ತೆ 50 ಶಿಕ್ಷಕರು ಹಾಗೂ 20 ಮಂದಿ ಇತರೆ ಸಿಬ್ಬಂದಿಗೆ ಕೋವಿಡ್‌ ದೃಢಪಟ್ಟಿದೆ.

ಶಾಲೆಗಳ ಆರಂಭಕ್ಕೆ ಮುನ್ನವೇ ಪರೀಕ್ಷೆ ಮಾಡಿಸಿಕೊಂಡವರ ವರದಿಗಳು ಬರುತ್ತಿದ್ದು, ಕೆಲವರಲ್ಲಿ ಕೋವಿಡ್ ಇರುವುದು ಖಚಿತವಾಗುತ್ತಿದೆ. ಹೀಗಾಗಿ, ಶಾಲೆಗಳು ಆರಂಭಗೊಂಡ ಬಳಿಕ ಇದುವರೆಗೆ ಸೋಂಕು ದೃಢಪಟ್ಟ ಶಿಕ್ಷಕರು ಹಾಗೂ ಸಿಬ್ಬಂದಿ ಸಂಖ್ಯೆ 236ಕ್ಕೆ ಏರಿದೆ.

161 ಶಿಕ್ಷಕರು ಹಾಗೂ ಐವರು ಸಿಬ್ಬಂದಿ ಸೇರಿ ಒಟ್ಟು 166 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಗುರುವಾರ ಮಾಹಿತಿ ನೀಡಿತ್ತು. ಶುಕ್ರವಾರ ಒಟ್ಟು ಸೋಂಕಿತ ಶಿಕ್ಷಕರ ಸಂಖ್ಯೆ 211ಕ್ಕೆ ಹಾಗೂ ಸಿಬ್ಬಂದಿ ಸಂಖ್ಯೆ 25ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಬೆಳಗಾವಿ ಜಿಲ್ಲೆಯ ಶಾಲೆಗಳಲ್ಲಿ 25 ಮಂದಿಗೆ, ಉತ್ತರ ಕನ್ನಡ ಜಿಲ್ಲೆಯಲ್ಲಿ 20 ಮಂದಿಗೆ ಸೋಂಕು ದೃಢಪಟ್ಟಿದೆ. ಉಳಿದಂತೆ ಬೆಂಗಳೂರು ನಗರ, ಯಾದಗಿರಿ, ಗದಗ, ಚಿಕ್ಕಮಗಳೂರು, ತುಮಕೂರು, ಹಾಸನ, ಮಂಡ್ಯ, ಚಾಮರಾಜ ನಗರ, ಮೈಸೂರು, ಶಿವಮೊಗ್ಗ ಜಿಲ್ಲೆಯಲ್ಲಿ 10ರಿಂದ 15 ಶಿಕ್ಷಕರು ಹಾಗೂ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ ಎಂದು ಇಲಾಖೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT