ಭಾನುವಾರ, ಮೇ 9, 2021
19 °C

Covid-19 Karnataka Update: ರಾಜ್ಯದಲ್ಲಿಂದು 17,489 ಹೊಸ ಪ್ರಕರಣ, 80 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಶನಿವಾರ 17,489 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 80 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 11,41,998 ಕ್ಕೆ ಏರಿಕೆಯಾಗಿದೆ. ಆ ಪೈಕಿ 13,270 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇಂದು 5,565 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 10,09,549ಕ್ಕೆ ತಲುಪಿದೆ. ಸದ್ಯ ರಾಜ್ಯದಲ್ಲಿ 1,19,160 ಸಕ್ರಿಯ ಪ್ರಕರಣಗಳಿವೆ. 589 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಂಗಳೂರಿನಲ್ಲಿ 11,404 ಹೊಸ ಪ್ರಕರಣಗಳು ವರದಿಯಾಗಿದ್ದು, 43 ಮಂದಿ ಕೊನೆಯುಸಿರೆಳೆದಿದ್ದಾರೆ. ಸೋಂಕಿತರ ಸಂಖ್ಯೆ 5.33 ಲಕ್ಷಕ್ಕೆ ಏರಿಕೆಯಾಗಿದೆ.

ಉಳಿದಂತೆ ಮೈಸೂರು 811, ಕಲಬುರಗಿ 560, ತುಮಕೂರು 507, ಬೀದರ್‌ 359, ಬಳ್ಳಾರಿ 355, ದಕ್ಷಿಣ ಕನ್ನಡ 309, ವಿಜಯಪುರ 281, ಬೆಂಗಳೂರು ಗ್ರಾಮಾಂತರ 262, ಹಾಸನ 224, ಮಂಡ್ಯ 223, ಬೆಳಗಾವಿ ಜಿಲ್ಲೆಯಲ್ಲಿ 188 ಪ್ರಕರಣಗಳು ಹೊಸದಾಗಿ ಪತ್ತೆಯಾಗಿವೆ.

ರಾಜ್ಯದಲ್ಲಿ ಶನಿವಾರ 1,43,308 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 2,34,48,009 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇವನ್ನೂ ಓದಿ...

ಕೋವಿಡ್‌: ಎಚ್‌.ಡಿ.ಕುಮಾರಸ್ವಾಮಿಗೆ ಸಿಗದ ಹಾಸಿಗೆ

ಕಠಿಣ ಕೋವಿಡ್ ರೂಲ್ಸ್: ಮದುವೆಗೆ ಪಾಸ್ ಕಡ್ಡಾಯ, ಜಾತ್ರೆಗೆ ನಿರ್ಬಂಧ ಜಾರಿ

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು