ಬೆಂಗಳೂರು: ಕೋವಿಡ್ ಪೀಡಿತರಾಗಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ(61) ಶನಿವಾರ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

ಕುಮಾರಸ್ವಾಮಿ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಕಳೆದ ಶನಿವಾರ (ಏ.17) ದೃಢಪಟ್ಟಿತ್ತು. ಬಳಿಕ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಸೋಂಕಿನಿಂದ ಗುಣಮುಖರಾಗಿರುವ ಬಗ್ಗೆ ಟ್ವೀಟ್ ಮಾಡಿದ್ದು, 'ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಇಂದು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನನ್ನ ಪ್ರಣಾಮಗಳು' ಎಂದಿದ್ದಾರೆ.

ಮುಂದಿನ ಎರಡು ವಾರಗಳು ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.

ಬಸವಕಲ್ಯಾಣ ಚುನಾವಣಾ ಪ್ರಚಾರ ಮುಗಿಸಿ ಬಂದ ಅವರ ಆರೋಗ್ಯ ವ್ಯತ್ಯಯವಾಗಿದ್ದರಿಂದಾಗಿ ಬೆಂಗಳೂರಿಗೆ ವಾಪಾಸ್ ಆದವರು ಮನೆಗೆ ಹೋಗದೇ ಹೋಟೆಲ್ನಲ್ಲೇ ಉಳಿದುಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.