ಬುಧವಾರ, ಮೇ 12, 2021
17 °C

ಕೋವಿಡ್‌: ಮುಖ್ಯಮಂತ್ರಿ ಬಿಎಸ್‌ವೈ ಆರೋಗ್ಯ ಸ್ಥಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೊದಲ ಬಾರಿ ಕೊರೊನಾ ವೈರಸ್‌ ಸೋಂಕಿಗೆ ಒಳಗಾಗಿದ್ದ ಸಿಎಂ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ನಡುವೆ ಕಡತಗಳಿಗೆ ಸಹಿ ಹಾಕಿದ್ದರು–ಸಂಗ್ರಹ ಚಿತ್ರ

ಬೆಂಗಳೂರು: ಎರಡನೇ ಬಾರಿಗೆ ಕೊರೊನಾ ಸೋಂಕು ತಗುಲಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಕೋವಿಡ್‌ ದೃಢಪಟ್ಟ ಕಾರಣ ಯಡಿಯೂರಪ್ಪ ಅವರನ್ನು ಶುಕ್ರವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಾ. ಸುದರ್ಶನ್ ಬಲ್ಲಾಳ್ ನೇತೃತ್ವದ ತಜ್ಞ ವೈದ್ಯರ ತಂಡ ಮುಖ್ಯಮಂತ್ರಿಯ ಆರೋಗ್ಯ ಸ್ಥಿತಿ ಮೇಲೆ ನಿಗಾ ಇರಿಸಿದೆ.

ವೈದ್ಯರು ಈಗಾಗಲೇ ಮುಖ್ಯಮಂತ್ರಿ ಅವರನ್ನು ವಿವಿಧ ಪರೀಕ್ಷೆಗೆ ಒಳಪಡಿಸಿದ್ದು, ಪರೀಕ್ಷೆಯಲ್ಲಿ ಎಲ್ಲವೂ ಕೂಡ ಸಾಮಾನ್ಯವಾಗಿದೆ. ಶ್ವಾಸಕೋಶಕ್ಕೆ ಸೋಂಕು ತಗಲುವ ಸಾಧ್ಯತೆಯ ಕಾರಣ ಶ್ವಾಸಕೋಶ ಸಂಬಂಧ ಎಕ್ಸ್​ ರೇ ಮಾಡಲಾಗಿದೆ. ಯಾವುದೇ ತೊಂದರೆ ಇಲ್ಲ. ಅವರ ಆರೋಗ್ಯ ಸ್ಥಿರವಾಗಿದೆ ಎಂದೂ  ಮೂಲಗಳು ಹೇಳಿವೆ.

Live–ಉಪ‌ಚುನಾವಣೆ: ಬೆಳಗಾವಿಯಲ್ಲಿ 13.13, ಮಸ್ಕಿಯಲ್ಲಿ ಶೇ 19.30 ಮತದಾನ

ಯಡಿಯೂರಪ್ಪ ಅವರ ಮಗಳ ಪದ್ಮಾ, ಮೊಮ್ಮಗಳು ಸೌಂದರ್ಯ ಮತ್ತು ಅವರ ಪತಿ‌ ಡಾ‌. ನಿರಂಜನ್ ಅವರಿಗೂ ಕೋವಿಡ್ ದೃಢಟ್ಟಿದೆ. ಅವರು ಏ.15ರಂದೇ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು