ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ರಾಜ್ಯದಲ್ಲಿ 877 ಹೊಸ ಪ್ರಕರಣಗಳು

Last Updated 1 ಜನವರಿ 2021, 15:03 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 877 ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದಾರೆ.

ಒಟ್ಟು ಪ್ರಕರಣಗಳ ಸಂಖ್ಯೆ 9.20 ಲಕ್ಷ ಮುಟ್ಟಿದ್ದು, ಈ ಪೈಕಿ 8.97 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ಈವರೆಗೂ ಸೋಂಕಿನಿಂದ 12,096 ಮಂದಿ ಸಾವಿಗೀಡಾಗಿದ್ದು, 11,058 ಪ್ರಕರಣಗಳು ಸಕ್ರಿಯವಾಗಿವೆ.

ಶುಕ್ರವಾರ 1,084 ಮಂದಿ ಗುಣಮುಖರಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಿಸಿದೆ. ಪ್ರಸ್ತುತ 189 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಕೋವಿಡ್‌ ದೃಢಪಟ್ಟ 464 ಪ್ರಕರಣಗಳು, ತುಮಕೂರಿನಲ್ಲಿ 32, ಚಿತ್ರದುರ್ಗದಲ್ಲಿ 39, ಚಿಕ್ಕಬಳ್ಳಾಪುರದಲ್ಲಿ 29 ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 28 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT