ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 523 ಹೊಸ ಪ್ರಕರಣ, 9 ಮಂದಿ ಸಾವು

Last Updated 6 ಅಕ್ಟೋಬರ್ 2021, 14:12 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಬುಧವಾರ 523 ಹೊಸ ಪ್ರಕರಣಗಳು ದೃಢಪಟ್ಟಿದ್ದು, 9 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,79,331 ಕ್ಕೆ ಏರಿಕೆಯಾಗಿದೆ. ಆ ಪೈಕಿ 37,854 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 29,29,629 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 11,819 ಸಕ್ರಿಯ ಪ್ರಕರಣಗಳಿವೆ.

ಇಂದು ಬೆಂಗಳೂರಿನಲ್ಲಿ 205 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಉಳಿದಂತೆ ಮೈಸೂರು 62, ಹಾಸನ 50, ದಕ್ಷಿಣ ಕನ್ನಡ 43, ತುಮಕೂರು ಜಿಲ್ಲೆಯಲ್ಲಿ ಹೊಸದಾಗಿ 28 ಪ್ರಕಣಗಳು ವರದಿಯಾಗಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.39 ರಷ್ಟಿದ್ದು, ಮರಣ ಪ್ರಮಾಣ ಶೇ 1.72 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT