ಶುಕ್ರವಾರ, ಅಕ್ಟೋಬರ್ 29, 2021
20 °C

Covid-19 Karnataka Update: 397 ಹೊಸ ಪ್ರಕರಣ, 5 ಮಂದಿ ಸಾವು

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 397 ಹೊಸ ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,80,170 ಕ್ಕೆ ಏರಿಕೆಯಾಗಿದೆ. ಆ ಪೈಕಿ 37,866 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 29,30,867 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 11,408 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.43 ರಷ್ಟಿದ್ದು, ಮರಣ ಪ್ರಮಾಣ ಶೇ 1.25 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು