ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 karnataka updates: 24 ಗಂಟೆಗಳಲ್ಲಿ 7,908 ಹೊಸ ಪ್ರಕರಣ ದಾಖಲು

Last Updated 14 ಆಗಸ್ಟ್ 2020, 16:05 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 7,908 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 5,257 ಮಂದಿ ಗುಣಮುಖರಾಗಿದ್ದಾರೆ ಹಾಗೂ 104 ಜನ ಸಾವಿ‌ಗೀಡಾಗಿದ್ದಾರೆ.

ಒಟ್ಟು 2,11,108 ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 1,26,499 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 80,884 ಸಕ್ರಿಯ ಪ್ರಕರಣಗಳಿದ್ದು, ಸೋಂಕಿನಿಂದ ಈವರೆಗೂ 3,717 ಜನ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ 2,452 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, 22 ಜನ ಮೃತಪಟ್ಟಿದ್ದಾರೆ. ಇದೇ ಅವಧಿಯಲ್ಲಿ 463 ಮಂದಿ ಗುಣಮುಖರಾಗಿದ್ದಾರೆ ಹಾಗೂ 35,115 ಸಕ್ರಿಯ ಪ್ರಕರಣಗಳಿವೆ.

ಬಳ್ಳಾರಿಯಲ್ಲಿ 608 ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ವರದಿಯಾಗಿವೆ ಹಾಗೂ 9 ಮಂದಿ ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ 291 ಪ್ರಕರಣಗಳು, 10 ಮಂದಿ ಸಾವು; ಬೆಳಗಾವಿಯಲ್ಲಿ 334 ಹೊಸ ಪ್ರಕರಣಗಳು; ಶಿವಮೊಗ್ಗದಲ್ಲಿ 413 ಪ್ರಕರಣಗಳು ಹಾಗೂ 3 ಮಂದಿ ಸಾವಿಗೀಡಾಗಿದ್ದಾರೆ.

ದಾವಣಗೆರೆಯಲ್ಲಿ 351 ಪ್ರಕರಣಗಳು ಹಾಗೂ 7 ಮಂದಿ ಸಾವು; ಉಡುಪಿಯಲ್ಲಿ 322 ಪ್ರಕರಣಗಳು, 7 ಮಂದಿ ಸಾವು; ದಕ್ಷಿಣ ಕನ್ನಡದಲ್ಲಿ 307 ಪ್ರಕರಣಗಳು, 6 ಮಂದಿ ಸಾವಿಗೀಡಾಗಿರುವುದಾಗಿ ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT