ಶನಿವಾರ, ಸೆಪ್ಟೆಂಬರ್ 19, 2020
22 °C
ರಾಜ್ಯದಲ್ಲಿ ಹೊಸದಾಗಿ 7,883 ಕೋವಿಡ್‌ ಪ್ರಕರಣಗಳು ವರದಿ

Covid-19 karnataka updates: 2 ಲಕ್ಷದತ್ತ ಸೋಂಕಿತರ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರೊನಾ ವೈರಸ್ ಸೋಂಕು ಪರೀಕ್ಷೆ– ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಮತ್ತೆ 7,883 ಮಂದಿ ಕೋವಿಡ್ ಪೀಡಿತರಾಗಿರುವುದು ಬುಧವಾರ ದೃಢಪಟ್ಟಿದೆ. ಈವರೆಗಿನ 24 ಗಂಟೆಗಳ ಅವಧಿಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿದ್ದು, ಸೋಂಕಿತರ ಸಂಖ್ಯೆ 2 ಲಕ್ಷದತ್ತ (1.96 ಲಕ್ಷ) ದಾಪುಗಾಲು ಇರಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ, 2,802 ಕೋವಿಡ್ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಪ್ರಥಮ ಕೋವಿಡ್ ಪ್ರಕರಣ ವರದಿಯಾಗಿ (ಮಾ.8ರಂದು) ಐದು ತಿಂಗಳು ಕಳೆದಿದೆ. ಕೋವಿಡ್‌ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ತಲುಪಲು 141 ದಿನಗಳು ತಗುಲಿದ್ದವು. ಆದರೆ, ನಂತರದ 96 ಸಾವಿರ ಪ್ರಕರಣಗಳು 16 ದಿನಗಳಲ್ಲಿ ದೃಢಪಟ್ಟಿವೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 6 ಸಾವಿರ ಪ್ರಕರಣಗಳು ಖಚಿತಪಟ್ಟಿವೆ. ಹೀಗಾಗಿ ಸೋಂಕಿತರ ಸಂಖ್ಯೆ ಗುರುವಾರ ಎರಡು ಲಕ್ಷದ ಗಡಿ ದಾಟುವ ಸಾಧ್ಯತೆಯಿದೆ. ಸೋಂಕಿತರಲ್ಲಿ ಮತ್ತೆ 113 ಮಂದಿ ಮೃತಪಟ್ಟಿರುವುದು ದೃಢಪಟ್ಟಿದ್ದು, ಸಾವಿಗೀಡಾದವರ ಸಂಖ್ಯೆ 3,510ಕ್ಕೆ ಏರಿದೆ.

ಬೆಂಗಳೂರಿನಲ್ಲಿ 2,360 ಮಂದಿ ಸೇರಿದಂತೆ ರಾಜ್ಯದಲ್ಲಿ 7,034 ಮಂದಿ ಬುಧವಾರ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇದು ಈವರೆಗೆ ಒಂದು ದಿನದ ಅವಧಿಯಲ್ಲಿ ಮನೆಗೆ ತೆರಳಿದವರ ಗರಿಷ್ಠ ಸಂಖ್ಯೆಯಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ1.12 ಲಕ್ಷ ದಾಟಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು