ಸೋಮವಾರ, ಸೆಪ್ಟೆಂಬರ್ 20, 2021
22 °C

ಕೋವಿಡ್‌: ಹೆಚ್ಚುವರಿ ನಿರ್ಬಂಧ ವಿಧಿಸುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋವಿಡ್‌ ಸಾಂಕ್ರಾಮಿಕ ನಿಯಂತ್ರಣ–ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಸ್ಥಳೀಯ ಪರಿಸ್ಥಿತಿಯನ್ನು ಆಧರಿಸಿ ಕೋವಿಡ್ ನಿಯಂತ್ರಣಕ್ಕೆ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಿ ರಾಜ್ಯ ವಿಪತ್ತು ನಿರ್ವಹಣಾ ಕಾರ್ಯಕಾರಿ ಸಮಿತಿ ಶುಕ್ರವಾರ ಆದೇಶ ಹೊರಡಿಸಿದೆ.

ಕೋವಿಡ್ ಪ್ರಕರಣಗಳ ದೃಢ ಪ್ರಮಾಣ ದರ ಸೇರಿದಂತೆ ವಿವಿಧ ಅಂಶಗಳ ಆಧಾರದಲ್ಲಿ ಆಯಾ ಜಿಲ್ಲಾಧಿಕಾರಿಗಳು ಕೋವಿಡ್ ನಿಯಂತ್ರಣ ಕ್ರಮಗಳಲ್ಲಿ ಬದಲಾವಣೆ ಮಾಡಬಹುದು. ಅಗತ್ಯ ಕಂಡುಬಂದಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಬಹುದು ಎಂದು ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.

ಅಂತರ ರಾಜ್ಯ ಗಡಿಗಳಲ್ಲಿ ಕೂಡ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವ ನಿರ್ಧಾರವನ್ನೂ ಜಿಲ್ಲಾಧಿಕಾರಿಗಳೇ ಕೈಗೊಳ್ಳಬಹುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Covid-19 India Update: ಕೋವಿಡ್ ಪ್ರಕರಣ ಮತ್ತೆ ಹೆಚ್ಚಳ, 44,230 ಮಂದಿಗೆ ಸೋಂಕು | Prajavani

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು