ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ರಾಜ್ಯದಲ್ಲಿ 5,576 ಪ್ರಕರಣಗಳು ಸಕ್ರಿಯ

Last Updated 25 ಫೆಬ್ರುವರಿ 2021, 15:16 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 453 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 947 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 7 ಮಂದಿ ಸಾವಿಗೀಡಾಗಿದ್ದಾರೆ.

ಪ್ರಸ್ತುತ 5,576 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟು 9,49,636 ಪ್ರಕರಣಗಳ ಪೈಕಿ ಈವರೆಗೂ 9,31,725 ಮಂದಿ ಗುಣಮುಖರಾಗಿದ್ದರೆ, 12,316 ಜನ ಮೃತಪಟ್ಟಿದ್ದಾರೆ.

ಜನವರಿ 16ರಿಂದ ಫೆಬ್ರುವರಿ 25ರ ವರೆಗೂ ಒಟ್ಟು 7,86,404 ಜನರಿಗೆ ಕೋವಿಡ್‌ ಲಸಿಕೆ ಹಾಕಲಾಗಿದೆ.

ಐಸಿಯುನಲ್ಲಿ 121 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ 271, ದಕ್ಷಿಣ ಕನ್ನಡದಲ್ಲಿ 24, ಮೈಸೂರಿನಲ್ಲಿ 27, ತುಮಕೂರಿನಲ್ಲಿ 24 ಹೊಸ ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT