ಬುಧವಾರ, ಡಿಸೆಂಬರ್ 2, 2020
23 °C

Covid-19 Karnataka: ಕಳೆದ 24 ಗಂಟೆಗಳಲ್ಲಿ 2,701 ಮಂದಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರೊನಾ ವೈರಸ್‌ ಸೋಂಕು ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹ–ಸಾಂದರ್ಭಿಕ ಚಿತ್ರ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 2,960 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 35 ಜನ ಸಾವಿಗೀಡಾಗಿದ್ದಾರೆ.

ಶುಕ್ರವಾರ 2,701 ಮಂದಿ ಗುಣಮುಖರಾಗಿದ್ದು, ಈವರೆಗೂ ಒಟ್ಟು 7,97,204 ಮಂದಿ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 33,319 ಸಕ್ರಿಯ ಪ್ರಕರಣಗಳು ಇರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಒಟ್ಟು ಕೋವಿಡ್‌–19 ಪ್ರಕರಣಗಳ ಸಂಖ್ಯೆ 8,41,889 ತಲುಪಿದೆ ಹಾಗೂ ಈವರೆಗೂ 11,347 ಮಂದಿ ಮೃತಪಟ್ಟಿದ್ದಾರೆ. ಐಸಿಯುನಲ್ಲಿ 901 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಅತಿ ಹೆಚ್ಚು 1,568 ಪ್ರಕರಣಗಳು ದಾಖಲಾಗಿದ್ದು, 831 ಮಂದಿ ಬಿಡುಗಡೆಯಾಗಿದ್ದಾರೆ. ತುಮಕೂರಿನಲ್ಲಿ 161 ಪ್ರಕರಣಗಳು, ಮೈಸೂರಿನಲ್ಲಿ 148, ಮಂಡ್ಯದಲ್ಲಿ119 ಹಾಗೂ ಹಾಸನದಲ್ಲಿ 97 ಪ್ರಕರಣಗಳು ದಾಖಲಾಗಿವೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು