ಶನಿವಾರ, ನವೆಂಬರ್ 28, 2020
18 °C

Covid-19 karnataka update: ಕಳೆದ 24 ಗಂಟೆಗಳಲ್ಲಿ 8,005 ಮಂದಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರಿನಲ್ಲಿ ಕೋವಿಡ್‌–19 ಪರೀಕ್ಷೆ–ಸಂಗ್ರಹ ಚಿತ್ರ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 5,018 ಪ್ರಕರಣಗಳು ವರದಿಯಾಗಿವೆ.

ಇದೇ ಅವಧಿಯಲ್ಲಿ ಸೋಂಕಿನಿಂದ 64 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 8,005 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 1,06,214 ಸಕ್ರಿಯ ಪ್ರಕರಣಗಳಿವೆ. ಒಟ್ಟು 7,70,604 ಪ್ರಕರಣಗಳು ದಾಖಲಾಗಿದ್ದು, ಈವರೆಗೂ 6,53,829 ಮಂದಿ ಗುಣಮುಖರಾಗಿದ್ದಾರೆ ಹಾಗೂ 10,542 ಮಂದಿ ಮೃತಪಟ್ಟಿದ್ದಾರೆ.

932 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಅತಿ ಹೆಚ್ಚು 2,481 ಪ್ರಕರಣಗಳು ದಾಖಲಾಗಿವೆ, 2,363 ಮಂದಿ ಗುಣಮುಖರಾಗಿದ್ದಾರೆ ಹಾಗೂ 17 ಮಂದಿ ಸಾವಿಗೀಡಾಗಿದ್ದಾರೆ.

ತುಮಕೂರಿನಲ್ಲಿ 253 ಪ್ರಕರಣಗಳು, ಬಳ್ಳಾರಿಯಲ್ಲಿ 186, ಬೆಂಗಳೂರು ಗ್ರಾಮಾಂತರದಲ್ಲಿ 173 ಪ್ರಕರಣಗಳು, ಚಿಕ್ಕಬಳ್ಳಾಪುರದಲ್ಲಿ 193,  ಮೈಸೂರಿನಲ್ಲಿ 151 ಪ್ರಕರಣಗಳು, ಮಂಡ್ಯದಲ್ಲಿ 130 ಪ್ರಕರಣಗಳು, ಚಿತ್ರದುರ್ಗದಲ್ಲಿ 106, ಹಾಸನದಲ್ಲಿ 105 ಹೊಸ ಪ್ರಕರಣಗಳು ದಾಖಲಾಗಿವೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು