ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 karnataka update: ಕಳೆದ 24 ಗಂಟೆಗಳಲ್ಲಿ 13,550 ಮಂದಿ ಗುಣಮುಖ

Last Updated 22 ಅಕ್ಟೋಬರ್ 2020, 15:43 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19ನಿಂದ 13,550 ಮಂದಿ ಗುಣಮುಖರಾಗಿದ್ದಾರೆ.

ಇದೇ ಅವಧಿಯಲ್ಲಿ 5,778 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 74 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 92,927 ಸಕ್ರಿಯ ಪ್ರಕರಣಗಳಿವೆ. ಒಟ್ಟು 7,88,551 ಪ್ರಕರಣಗಳು ದಾಖಲಾಗಿದ್ದು, ಈವರೆಗೂ 6,84,835 ಮಂದಿ ಗುಣಮುಖರಾಗಿದ್ದಾರೆ ಹಾಗೂ 10,770 ಮಂದಿ ಮೃತಪಟ್ಟಿದ್ದಾರೆ.

ಐಸಿಯುನಲ್ಲಿ 940 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಅತಿ ಹೆಚ್ಚು 2,807 ಪ್ರಕರಣಗಳು ದಾಖಲಾಗಿದ್ದರೆ, 7,683 ಮಂದಿ ಗುಣಮುಖರಾಗಿದ್ದಾರೆ ಹಾಗೂ 36 ಮಂದಿ ಸಾವಿಗೀಡಾಗಿದ್ದಾರೆ.

ಮೈಸೂರಿನಲ್ಲಿ 308 ಹೊಸ ಪ್ರಕರಣಗಳು, ಚಿಕ್ಕಬಳ್ಳಾಪುರದಲ್ಲಿ 237, ಬಳ್ಳಾರಿಯಲ್ಲಿ 218, ಬೆಂಗಳೂರು ಗ್ರಾಮಾಂತರದಲ್ಲಿ 280 ಹಾಗೂ ಮಂಡ್ಯದಲ್ಲಿ 191 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT