ಭಾನುವಾರ, ನವೆಂಬರ್ 29, 2020
20 °C

Covid-19 Karnataka Update: 8.22 ಲಕ್ಷ ಕೋವಿಡ್–19 ಸೋಂಕಿತರು ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರಿನಲ್ಲಿ 840 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 1,565 ಜನರಿಗೆ ಕೋವಿಡ್‌–19 ದೃಢಪಟ್ಟಿದೆ, ಇದರೊಂದಿಗೆ ರಾಜ್ಯದಲ್ಲಿ ಇದುವರೆಗೆ ವರದಿಯಾದ ಕೋವಿಡ್‌–19 ಪ್ರಕರಣಗಳ ಸಂಖ್ಯೆ 8,61,647ಕ್ಕೆ ಏರಿಯಾಗಿದೆ.

ಒಂದು ತಿಂಗಳಿಂದ ಹೊಸ ಪ್ರಕರಣಗಳ ಸಂಖ್ಯೆಯು ಇಳಿಮುಖವಾಗಿದ್ದು, ಈ ಅವಧಿಯಲ್ಲಿ ಚೇತರಿಸಿಕೊಳ್ಳುವವರ ಸಂಖ್ಯೆಯು ಏರಿಕೆ ಕಂಡಿದೆ. ಪರಿಣಾಮ ಸೋಂಕಿತರು ಹಾಗೂ ಗುಣಮುಖರ ನಡುವಿನ ಅಂತರ ಕಡಿಮೆಯಾಗಿದೆ.

ಕಳೆದ 24 ಗಂಟೆ ಅವಧಿಯಲ್ಲಿ ಒಟ್ಟು 2,363 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೆ 8,22,953 ಸೋಂಕಿತರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸಾವಿನ ಸಂಖ್ಯೆ 11,529ಕ್ಕೆ ತಲುಪಿದೆ. 27,146 ಪ್ರಕರಣಗಳು ಸಕ್ರಿಯವಾಗಿವೆ. ರಾಜಧಾನಿ ಬೆಂಗಳೂರಿನಲ್ಲೇ 18 ಸಾವಿರಕ್ಕೂ ಹೆಚ್ಚು ಪ್ರಕರಣಗಳ ಸಕ್ರಿಯವಾಗಿವೆ. ಇದರಲ್ಲಿ 746 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌

ಬೆಂಗಳೂರು ಹೊರತುಪಡಿಸಿ ಇಂದು ತುಮಕೂರು (79), ಮೈಸೂರು (71), ಚಿತ್ರದುರ್ಗದಲ್ಲಿ (52) ಐವತ್ತಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು