ಶುಕ್ರವಾರ, ಫೆಬ್ರವರಿ 3, 2023
24 °C

ಕೋವಿಡ್: ಪರೀಕ್ಷೆ ಹೆಚ್ಚಳವಿಲ್ಲ- ಡಿ. ರಂದೀಪ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಹವಾಮಾನ ವೈಪರೀತ್ಯದಿಂದ ಕೆಲವರು ಜ್ವರ ಪೀಡಿತರಾಗುತ್ತಿದ್ದಾರೆ. ಕೋವಿಡ್ ಬಗೆಗೆ ಆತಂಕ ಪಡಬೇಕಾದ ಅಗತ್ಯವಿಲ್ಲ’ ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ತಿಳಿಸಿದ್ದಾರೆ.

‘ಚೀನಾದಲ್ಲಿ ಸಾಮೂಹಿಕವಾಗಿ ಪರೀಕ್ಷೆ ಮಾಡಲಾಗುತ್ತಿದೆ. ಆದ್ದರಿಂದ ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಪತ್ತೆಯಾಗುತ್ತಿವೆ. ಒಬ್ಬರು ಸೋಂಕಿತರಾದರೆ ಕಟ್ಟಡದ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ದೇಶದಲ್ಲಿ ಈ ಪರೀಕ್ಷಾ ಪದ್ಧತಿಯನ್ನು ಕೈಬಿಡಲಾಗಿದೆ. ಈಗ ಕೆಲ ಪ್ರಕರಣ ಪತ್ತೆಯಾದರೂ ಸೋಂಕಿತರು ಲಕ್ಷಣರಹಿತರಾಗಿರುತ್ತಿದ್ದಾರೆ. ಆದ್ದರಿಂದ ಸೋಂಕಿತರ ಸಂಪರ್ಕಿತರಿಗೆ ಪರೀಕ್ಷೆ ಮಾಡುತ್ತಿಲ್ಲ. ಪರೀಕ್ಷೆಗಳ ಸಂಖ್ಯೆಯನ್ನೂ ಇಳಿಕೆ ಮಾಡಿದೆ’ ಎಂದು ಹೇಳಿದರು. 

‘ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ (ಐಎಲ್‌ಐ), ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಪ್ರಕರಣಗಳ ಮೇಲೆ ನಿಗಾ ಇಡಲಾಗುತ್ತಿದೆ. ಈ ಪ್ರಕರಣಗಳು ಹೆಚ್ಚಳವಾಗಿಲ್ಲ. ಕೋವಿಡ್ ಸಂಬಂಧಿತ ಆಸ್ಪತ್ರೆ ದಾಖಲಾತಿ ಬೆರಳಣಿಕೆಯಷ್ಟಿದೆ. ಕೋವಿಡ್ ಚಿಕಿತ್ಸಾ ವಿಧಾನವೂ ಬದಲಾಗಿದೆ. ಇದರಿಂದಾಗಿ ಮರಣವೂ ನಿಯಂತ್ರಣಕ್ಕೆ ಬಂದಿದೆ. ಹಾಗಾಗಿ, ಇಲ್ಲಿ ಯಾವುದೇ ನಿರ್ಬಂಧ ವಿಧಿಸುವುದಿಲ್ಲ. ಪರೀಕ್ಷೆಯಲ್ಲಿಯೂ ಬದಲಾವಣೆಯಿಲ್ಲ’ ಎಂದು ವಿವರಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು