ಗುರುವಾರ , ಮೇ 13, 2021
22 °C

ಕೋವಿಡ್‌ 3ನೇ ಅಲೆಗೂ ತಯಾರಿ ತಜ್ಞರ ಸಮಿತಿ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ನ ಸಂಭಾವ್ಯ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸುವುದಕ್ಕಾಗಿ ಈಗಿನಿಂದಲೇ ತಯಾರಿ ನಡೆಸಲು ಸರ್ಕಾರ ನಿರ್ಧರಿಸಿದೆ.

ಆಸ್ಪತ್ರೆ ಹಾಗೂ ವೈದ್ಯಕೀಯ ಸೌಲಭ್ಯ ಗಳನ್ನು ಸಜ್ಜುಗೊಳಿಸುವ ಜತೆಗೆ ಖಾಸಗಿ ಸಹಭಾಗಿತ್ವದಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಇದಕ್ಕೆ ಪೂರಕವಾಗಿ ಖಾಸಗಿ ಆಸ್ಪತ್ರೆಗಳ ಪ್ರಮುಖರು, ವೈದ್ಯರನ್ನು ಒಳಗೊಂಡ ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಕೋವಿಡ್ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಈಗ ನೀಡುತ್ತಿರುವ ಪ್ರೋತ್ಸಾಹ ಭತ್ಯೆ ಹೆಚ್ಚಿಸಲು ಹಾಗೂ ಕೋವಿಡ್ ಕರ್ತವ್ಯ
ದಲ್ಲಿ ತೊಡಗಿರುವ ವೈದ್ಯರು/ವೈದ್ಯಕೀಯ ಸಿಬ್ಬಂದಿ  ಸೋಂಕಿತರಾದಲ್ಲಿ ಅವರಿಗೆ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ ನೀಡಲು ಕ್ರಮ ವಹಿಸಲು ನಿರ್ಧರಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು