ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾನುವಾರು ಹತ್ಯೆ: ಕರ್ನಾಟಕ ರಾಜ್ಯದಲ್ಲಿ 413 ಪ್ರಕರಣ ದಾಖಲು

Last Updated 23 ಸೆಪ್ಟೆಂಬರ್ 2021, 3:08 IST
ಅಕ್ಷರ ಗಾತ್ರ

ಬೆಂಗಳೂರು: ಜಾನುವಾರು ಹತ್ಯೆ ನಿಷೇಧ ಕಾಯ್ದೆ ಉಲ್ಲಂಘಿಸಿದ ಆರೋಪದ ಮೇಲೆ ಈವರೆಗೆ 413 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‌ ಮಾಹಿತಿ ನೀಡಿದ್ದಾರೆ.

ಬುಧವಾರ ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ವೈ.ಎ. ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ‘ಉತ್ತರ ಕನ್ನಡ ಜಿಲ್ಲೆಯಲ್ಲಿ 2020ರಲ್ಲಿ 54 ಮತ್ತು 2021ರಲ್ಲಿ 41 ಪ್ರಕರಣಗಳನ್ನು ದಾಖಲಿಸಲಾಗಿದೆ. ಕೋಲಾರ ಜಿಲ್ಲೆಯಲ್ಲಿ 65, ಹಾಸನ ಜಿಲ್ಲೆಯಲ್ಲಿ 43, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 40 ಪ್ರಕರಣಗಳನ್ನು ದಾಖಲಿಸಲಾಗಿದೆ’ ಎಂದು ತಿಳಿಸಿದ್ದಾರೆ.

ರಾಮನಗರ, ತುಮಕೂರು, ದಾವಣಗೆರೆ, ಧಾರವಾಡ, ರಾಯಚೂರು, ಯಾದಗಿರಿ ಮತ್ತು ಬೀದರ್‌ ಜಿಲ್ಲೆಗಳಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT