ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾನುವಾರು ಸಾಗಣೆ: 50ಕ್ಕೂ ಹೆಚ್ಚು ಎಫ್‌ಐಆರ್‌

Last Updated 27 ಮೇ 2021, 21:56 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಜಾನುವಾರು ಸಂರಕ್ಷಣೆ ಕಾಯ್ದೆ –2020ರ ನಿಯಮಾವಳಿ ರೂಪುಗೊಳ್ಳದೆ ಇದ್ದರೂ ರಾಜ್ಯದಲ್ಲಿ 50ಕ್ಕೂ ಹೆಚ್ಚು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಈ ಕಾಯ್ದೆ ಪ್ರಶ್ನಿಸಿ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಆರೋಪಿಸಿದ್ದು, ಹೊಸ ಕಾಯ್ದೆಯಡಿ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರ್ಕಾರ ಮತ್ತೊಮ್ಮೆ ಭರವಸೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಆಕ್ಷೇಪಣೆ ಸಲ್ಲಿಸಲು ಹೆಚ್ಚಿನ ಸಮಯಾವಕಾಶ ಕೋರಿದರೆ ಅರ್ಜಿದಾರರು ಕೋರಿರುವಂತೆ ಮಧ್ಯಂತರ ಪರಿಹಾರದ ಆದೇಶ ಹೊರಡಿಸಲಾಗುವುದು’ ಎಂದು ಸರ್ಕಾರಕ್ಕೆ ಪೀಠ ತಿಳಿಸಿತು. ವಿಚಾರಣೆಯನ್ನು ಜೂ.9ಕ್ಕೆ ಮುಂದೂಡಿತು.

‘ಕೃಷಿ ಉದ್ದೇಶಕ್ಕಾಗಿ ಒಂದೆಡೆಯಿಂದ ಮತ್ತೊಂದೆಡೆಗೆ ಜಾನುವಾರು ಸಾಗಿಸಿದರೂ ರೈತರ ವಿರುದ್ಧ ಪ್ರಕರಣ ದಾಖಲಿಸಲು ಹೊಸ ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ. ಜಾನುವಾರು ರಕ್ಷಣೆ ಹೆಸರಿನಲ್ಲಿ ಈ ಕಾಯ್ದೆಯನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳಲಿದ್ದಾರೆ’ ಎಂಬುದು ಅರ್ಜಿದಾರರ ಆರೋಪ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT