ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡನೆ

Last Updated 24 ನವೆಂಬರ್ 2020, 19:31 IST
ಅಕ್ಷರ ಗಾತ್ರ

ಬೆಂಗಳೂರು: ಇದೇ ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ತಿದ್ದುಪಡಿ ಮಸೂದೆ ಮಂಡಿಸಲಾಗುವುದು ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ತಿಳಿಸಿದ್ದಾರೆ.

'ಮಸೂದೆ ಮಂಡನೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪನವರ ಜತೆ ಚರ್ಚಿಸಿ, ಒಪ್ಪಿಗೆ ಪಡೆಯಲಾಗಿದೆ. ಇದಕ್ಕೆ ಅಗತ್ಯವಿರುವ ತಯಾರಿ ನಡೆಸಲಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿರುವ ವಿವಿಧ ರಾಜ್ಯಗಳ ಕಾಯ್ದೆಗಳ ಅಧ್ಯಯನ ನಡೆಸಲಾಗಿದ್ದು, ಈ ಬಗ್ಗೆ ಇಲಾಖಾ ಅಧಿಕಾರಿಗಳ ಮಟ್ಟದಲ್ಲಿ ಪರಿಣಿತರ ಜತೆ ಚರ್ಚೆ ನಡೆಸಲಾಗಿದೆ’ ಎಂದು ಹೇಳಿದ್ದಾರೆ.

‘ಪಶುಸಂಗೋಪನೆ ಇಲಾಖೆಯ ಜವಾಬ್ದಾರಿ ನೀಡಿದ ದಿನದಿಂದಲೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವ ಮಹದಾಸೆ ಇತ್ತು. ಅದು ಸಾಕಾರಗೊಳ್ಳುವ ದಿನ ಹತ್ತಿರವಾಗಿದೆ’ ಎಂದೂ ಸಚಿವರು ತಿಳಿಸಿದ್ದಾರೆ.

2010 ರಲ್ಲಿ ಕರ್ನಾಟಕ ಗೋಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 1964 ಬದಲಿಗೆ ಕರ್ನಾಟಕ ಜಾನುವಾರು ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಮಸೂದೆ 2010 ಅನ್ನು ಅಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಧಾನಮಂಡಲದಲ್ಲಿ ಮಂಡಿಸಲಾಯಿತು. ರಾಜ್ಯಪಾಲರ ಅನುಮೋದನೆಗೆ ಕಳಿಸಲಾಗಿತ್ತು. ಅಂದು ರಾಜ್ಯಪಾಲರಾಗಿದ್ದ ಹಂಸರಾಜ್ ಭಾರಧ್ವಾಜ್ ಅವರು ಅದನ್ನು ರಾಷ್ಟ್ರಪತಿಗಳ ಅನುಮೋದನೆಗೆ ಕಳಿಸಿದ್ದರಿಂದ ಕಾಯ್ದೆಯ ಜಾರಿ ವಿಳಂಬವಾಯಿತು. ಅಲ್ಲದೆ, ಕೇಂದ್ರ ಗೃಹ ಇಲಾಖೆ ಕೆಲವು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿ ತಿದ್ದುಪಡಿಗೆ ಸೂಚನೆ ನೀಡಿತ್ತು’ ಎಂದು ಹೇಳಿದ್ದಾರೆ.

‘ಆ ಬಳಿಕ ಅಧಿಕಾರ ಹಿಡಿದ ಕಾಂಗ್ರೆಸ್ ಸರ್ಕಾರ 1964 ರ ಗೋಹತ್ಯೆ ನಿಷೇಧ ಕಾಯ್ದೆಯನ್ನೇ ಮುಂದುವರಿಸಿತು. ಈಗ ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು, ಕಾಯ್ದೆಯನ್ನು ಮತ್ತಷ್ಟು ಬಲಪಡಿಸಿ ಜಾರಿ ಮಾಡುತ್ತೇವೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT